ಬೆಂಗಳೂರು, ಮೇ 21 (DaijiworldNews/HR): ರಾಜ್ಯ ವಿಧಾನಸಭೆಯ ಹಂಗಾಮಿ ಸ್ಪೀಕರ್ ಆಗಿ ಆರ್.ವಿ ದೇಶಪಾಂಡೆ ನೇಮಕಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಸದನದ ಸಭಾಧ್ಯಕ್ಷರ ಆಯ್ಕೆಯಾಗುವ ವರೆಗೆ ವಿಧಾನ ಸಭಾಧ್ಯಕ್ಷರ ಕರ್ತವ್ಯವನ್ನು ನಿರ್ವಹಿಸಲು ಶಾಸಕರಾದ ಆರ್.ವಿ ದೇಶಪಾಂಡೆ ಅವರನ್ನು ನೇಮಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಅವರು ಶನಿವಾರ ಪ್ರಮಾಣ ವಚನ ಸ್ವೀಕರಿಸಿದರು. ಬೆಂಗಳೂರಿನ ಕಂಠೀರವ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಎಂಟು ಸಚಿವರೂ ಪ್ರಮಾಣ ವಚನ ಸ್ವೀಕರಿಸಿದ್ದರು.