ಬೆಂಗಳೂರು, ಮೇ 22 (DaijiworldNews/MS): 16ನೇ ವಿಧಾನಸಭೆಯ ಮೊದಲ ಅಧಿವೇಶನದ ಮೊದಲ ದಿನದ ಕಲಾಪ ಆರಂಭವಾಗಿದ್ದು ಹಂಗಾಮಿ ಸ್ಪೀಕರ್ ಆಗಿ ಆರ್.ವಿ.ದೇಶಪಾಂಡೆ ಪ್ರಮಾಣವಚನ ಸ್ವೀಕರಿಸಿದ್ದಾರೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರಮಾಣವಚನ ಬೋಧಿಸಿದ್ದಾರೆ.
ಇದಾದ ಬಳಿಕ ನೂತನ ಶಾಸಕರಿಂದ ಪ್ರಮಾಣವಚನ ಸ್ವೀಕಾರ ಪ್ರಕ್ರಿಯೆ ಆರಂಭವಾಗಿದೆ. ಮೊದಲಿಗೆ ಶಾಸಕರಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಗವಂತನ ಹೆಸರಿನಲ್ಲಿ ಹಾಗೂ ಕನಕಪುರ ಕ್ಷೇತ್ರದ ಶಾಸಕರಾಗಿ ಡಿ.ಕೆ.ಶಿವಕುಮಾರ್ ಗಂಗಾಧರ ಅಜ್ಜಯ್ಯನ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
ಸಚಿವರಾಗಿರುವ ಡಾ.ಜಿ.ಪರಮೇಶ್ವರ್, K.H.ಮುನಿಯಪ್ಪ, ಕೆ.ಜೆ.ಜಾರ್ಜ್, ಎಂ.ಬಿ.ಪಾಟೀಲ್, ಪ್ರಿಯಾಂಕ್ ಖರ್ಗೆ ಸತೀಶ್ ಜಾರಕಿಹೊಳಿ, ರಾಮಲಿಂಗಾರೆಡ್ಡಿ ಪ್ರಮಾಣ ವಚನ ಸ್ವೀಕರಿಸಿದರು. ಇವರಲ್ಲದೇ ಯು.ಟಿ.ಖಾದರ್, ಶಿವಾನಂದ ಪಾಟೀಲ್ ಕೂಡಾ ಪ್ರಮಾಣವಚನ ಸ್ವೀಕರಿಸಿದ್ದಾರೆ.