ಬೆಂಗಳೂರು, ಮೇ 22 (DaijiworldNews/HR): ಕರ್ನಾಟಕ ಸರ್ಕಾರಕ್ಕೆ ಮುರುಘಾಮಠಕ್ಕೆ ಆಡಳಿತಾಧಿಕಾರಿ ನೇಮಿಸುವ ಅಧಿಕಾರ ಇಲ್ಲ ಎಂದು ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.
ನ್ಯಾ.ಕೃಷ್ಣ ದೀಕ್ಷೀತ್ ಅವರಿದ್ದ ಹೈಕೋರ್ಟ್ ಏಕಸದಸ್ಯ ಪೀಠ ತೀರ್ಪು ನೀಡಿದ್ದು, ಮುರುಘಾಮಠಕ್ಕೆ ವೀರಶೈವ ಮುಖಂಡರು, ಸಮಾಜದ ಪ್ರಮುಖರು ಆಡಳಿತ ನಡೆಸಬಹುದು. 4 ವಾರಗಳ ಮಾತ್ರ ಆಡಳಿತಾಧಿಕಾರಿ ಮುಂದುವರೆಯಬಹುದು. 4 ವಾರಗಳ ನಂತರ ಆಡಳಿತಾಧಿಕಾರಿಗೆ ಅಧಿಕಾರ ಇಲ್ಲ ಎಂದಿದೆ.
ಇನ್ನು ಈ ಸಂಬಂಧ ಡಾ. ಶಿವಮೂರ್ತಿ ಮುರುಘಾಶ್ರೀ ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ್ದರು. ಆಡಳಿತಾಧಿಕಾರಿ ನೇಮಿಸುವ ಸರ್ಕಾರದ ಕ್ರಮವನ್ನು ಪ್ರಶ್ನಿಸಿದ್ದರು.
ಇಂದು ವಿಚಾರಣೆ ನಡೆಸಿದ ಹೈಕೋರ್ಟ್ ನ ಏಕಸದಸ್ಯ ನ್ಯಾಯಪೀಠ, ಸರ್ಕಾರಕ್ಕೆ ಮುರುಘಾಮಠಕ್ಕೆ ಆಡಳಿತಾಧಿಕಾರಿ ನೇಮಿಸುವ ಅಧಿಕಾರ ಇಲ್ಲ ಎಂದಿದೆ.