ನವದೆಹಲಿ,ಮೇ23(DaijiworldNews/KH):ಸಿಬಿಐ ತನಿಖೆ ನಡೆಸುತ್ತಿರುವ ಅಬಕಾರಿ ನೀತಿ ಹಗರಣ ಪ್ರಕರಣದಲ್ಲಿ ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮತ್ತು ಎಎಪಿ ನಾಯಕ ಮನೀಶ್ ಸಿಸೋಡಿಯಾ ಅವರ ನ್ಯಾಯಾಂಗ ಬಂಧನವನ್ನು ದೆಹಲಿಯ ರೂಸ್ ಅವೆನ್ಯೂ ಕೋರ್ಟ್ ಜೂನ್ 1ರವರೆಗೆ ವಿಸ್ತರಿಸಿದೆ.
ಅಬಕಾರಿ ನೀತಿಯ ರಚನೆ ಮತ್ತು ಅನುಷ್ಠಾನದಲ್ಲಿನ ಅಕ್ರಮಗಳು ನಡೆದಿದ್ದು, ಇದಕ್ಕೆ ಸಂಬಂಧಿಸಿದ ಪ್ರಕರಣದ ತನಿಖೆಯಲ್ಲಿ ಸಿಸೋಡಿಯಾ ಅವರನ್ನು ಸಿಬಿಐ ಬಂಧನಕ್ಕೆ ಒಳಪಡಿಸಿದೆ.
ಈ ತಿಂಗಳ ಆರಂಭದಲ್ಲಿಇದೇ ನ್ಯಾಯಾಲಯವು ದೆಹಲಿ ಅಬಕಾರಿ ನೀತಿ ಕುರಿತ ಸಿಬಿಐ ಪ್ರಕರಣದಲ್ಲಿ ಸಿಸೋಡಿಯಾ ಅವರ ನ್ಯಾಯಾಂಗ ಬಂಧನವನ್ನು ಜೂನ್ 2 ರವರೆಗೆ ವಿಸ್ತರಿಸಿದ ನಂತರ ಈ ಬೆಳವಣಿಗೆ ನಡೆದಿದೆ.
ಇನ್ನು ಮೇ 8 ರಂದು ರೂಸ್ ಅವೆನ್ಯೂ ನ್ಯಾಯಾಲಯವು ಅಬಕಾರಿ ನೀತಿ ವಿಷಯದ ಇಡಿ ಪ್ರಕರಣದಲ್ಲಿ ಮನೀಶ್ ಸಿಸೋಡಿಯಾ ಅವರ ನ್ಯಾಯಾಂಗ ಬಂಧನವನ್ನು ಮೇ 23 ರವರೆಗೆ ವಿಸ್ತರಿಸಿತ್ತು ಅಲ್ಲದೇ, ಅಬಕಾರಿ ಸಚಿವರಾಗಿ ಸಿಸೋಡಿಯಾ ಅವರ ಚಟುವಟಿಕೆಗಳಿಂದಾಗಿ, ಅಬಕಾರಿ ನೀತಿ ಪ್ರಕರಣದಲ್ಲಿ 622 ಕೋಟಿ ರೂ.ಗಳ ಅಪರಾಧದ ಆದಾಯವನ್ನು ಗಳಿಸಲಾಗಿದೆ ಎಂದು ಇಡಿ ನ್ಯಾಯಾಲಯಕ್ಕೆ ಸಲ್ಲಿಸಿದ ನಂತರ ಈ ಬೆಳವಣಿಗೆ ನಡೆದಿದೆ ಎಂದು ವರದಿ ಮಾಡಿದೆ.