ಲಕ್ನೋ, ಮೇ 23(DaijiworldNews/MS): ಅಯೋಧ್ಯೆಯಲ್ಲಿ ರಾಮಮಂದಿರದ ಮೊದಲ ಹಂತದ ನಿರ್ಮಾಣ ಕಾರ್ಯ ಮುಂದಿನ ಡಿಸೆಂಬರ್ 30ರೊಳಗೆ ಪೂರ್ಣಗೊಳ್ಳಲಿದ್ದು, ಆ ಬಳಿಕ ದರ್ಶನ ಮಾಡಲು ಭಕ್ತರಿಗೆ ಅನುವು ಮಾಡಿಕೊಡಲಾಗುವುದು ಎಂದು ರಾಮಮಂದಿರ ನಿರ್ಮಾಣ ಸಮಿತಿಯ ಅಧ್ಯಕ್ಷ ನೃಪೇಂದ್ರ ಮಿಶ್ರಾ ತಿಳಿಸಿದ್ದಾರೆ.
ದೇವಾಲಯವನ್ನು ಮೂರು ಹಂತಗಳಲ್ಲಿ ನಿರ್ಮಿಸಲಾಗುತ್ತಿದೆ. ಅದರಲ್ಲಿ ಮೊದಲ ಹಂತದ ನಿರ್ಮಾಣ ಕಾರ್ಯ ಪೂರ್ಣಗೊಂಡ ನಂತರ ಭಕ್ತರು ದೇವಾಲಯವನ್ನು ಪ್ರವೇಶಿಸಲು ಸಾಧ್ಯವಾಗುತ್ತದೆ. ಮೊದಲ ಹಂತದಲ್ಲಿ ನೆಲ ಮಹಡಿಯಲ್ಲಿ ಐದು ‘ಮಂಟಪಗಳು’ ಅವುಗಳಲ್ಲಿ ಅತ್ಯಂತ ಪ್ರಮುಖವಾದದ್ದು ಗರ್ಭಗುಡಿ. ಐದು ಮಂಟಪಗಳ ನಿರ್ಮಾಣದಲ್ಲಿ ಸುಮಾರು 160 ಕಂಬ ಬಳಸಲಾಗಿದ್ದು, ಈ ಎಲ್ಲ ಕಾಮಗಾರಿಗಳು ಡಿಸೆಂಬರ್ನೊಳಗೆ ಪೂರ್ಣಗೊಳ್ಳಲಿವೆ ಎಂದರು.
ಎರಡನೇ ಮಹಡಿಗಳನ್ನು 2024ರ ಡಿಸೆಂಬರ್ 30 ರೊಳಗೆ ಪೂರ್ಣಗೊಳಿಸಲಾಗುವುದು. ಇನ್ನು ಮೂರ್ತಿ ಪ್ರತಿಷ್ಠಾಪನೆಯಾಗಲಿದ್ದು, ಈ ವರ್ಷಾಂತ್ಯದೊಳಗೆ ಭಕ್ತರಿಗೆ ದರ್ಶನ ಸಿಗಲಿದೆ ಎಂದು ಮಾಹಿತಿ ನೀಡಿದರು.