ಬೆಂಗಳೂರು, ಮೇ 25(DaijiworldNews/MS): ರಾಜ್ಯದಲ್ಲಿ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರ ಸಮ್ಮಿಶ್ರ ಸರ್ಕಾರ ಇದೆಯೇ ಹೊರತು ಕಾಂಗ್ರೆಸ್ ಸರ್ಕಾರವಲ್ಲ ಎಂದು ಮಾಜಿ ಸಚಿವ ಆರ್.ಅಶೋಕ್ ಲೇವಡಿ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿ, ಕಾಂಗ್ರೆಸ್ ಅಂದರೆ ಗೂಂಡಾಗಿರಿ;ಗೂಂಡಾಗಿರಿ ಅಂದರೆ ಕಾಂಗ್ರೆಸ್ ಎನ್ನುವುದು ಸಿಎಂ ಮತ್ತು ಡಿಸಿಎಂ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆಯಲ್ಲಿ ಹಾಕಿರುವ ಬೆದರಿಕೆಯಿಂದ ಗೊತ್ತಾಗುತ್ತದೆ. ಕಾಂಗ್ರೆಸ್ ನೈತಿಕ ಪೊಲೀಸ್ಗಿರಿ ಹೆಸರಿನಲ್ಲಿ ದಾಳಿ ನಡೆಸುವ ಮೂಲಕ ರಾಜ್ಯದಲ್ಲಿ ಗಲಭೆ ಸೃಷ್ಟಿಸಲು ಮುಂದಾಗಿದೆ ಎಂದು ದೂರಿದ್ದಾರೆ
ನಾನು ಸಹ ಉಪ ಮುಖ್ಯಮಂತ್ರಿಯಾಗಿ ಕೆಲಸ ಮಾಡಿದ್ದೇನೆ. ಅದು ಸಾಂವಿಧಾನಿಕ ಹುದ್ದೆ ಅಲ್ಲ. ಆದರೆ ಡಿ.ಕೆ.ಶಿವಕುಮಾರ್ ಅವರು ಮಾತ್ರ ಮುಖ್ಯಮಂತ್ರಿಗಳು ಮಾತನಾಡಿದ ನಂತರ ತಾವೂ ಮಾತನಾಡಬೇಕು ಎಂಬ ಚಾಳಿ ಆರಂಭಿಸಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.