ನವದೆಹಲಿ, ಮೇ 26(DaijiworldNews/MS): ತಿಹಾರ್ ಜೈಲಿನಲ್ಲಿ ಸ್ನಾನಗೃಹದಲ್ಲಿ ಕಾಲುಜಾರಿ ಬಿದ್ದು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿರುವ ದೆಹಲಿಯ ಮಾಜಿ ಸಚಿವ, ಆಮ್ ಆದ್ಮಿ ಪಕ್ಷದ ನಾಯಕ ಸತ್ಯೇಂದ್ರ ಜೈನ್ ಗೆ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ನೀಡಿದೆ.
ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ಕಳೆದ ವರ್ಷದಿಂದ ಬಂಧನದಲ್ಲಿರುವ ಸತ್ಯೇಂದ್ರ ಜೈನ್ ಅವರಿಗೆ ವೈದ್ಯಕೀಯ ಕಾರಣಗಳಿಗಾಗಿ ಸುಪ್ರೀಂ ಕೋರ್ಟ್ ಇಂದು ಆರು ವಾರಗಳ ಮಧ್ಯಂತರ ಜಾಮೀನು ನೀಡಿದೆ.
ಕಳೆದ ಒಂದು ವಾರದಲ್ಲಿ ಜೈನ್ ಅವರನ್ನು ಆಸ್ಪತ್ರೆಗೆ ಕರೆದೊಯ್ಯುವುದು ಇದು ಎರಡನೇ ಬಾರಿ. ಕೆಲವೇ ದಿನಗಳ ಹಿಂದೆ ಬೆನ್ನುಮೂಳೆಯ ಸಮಸ್ಯೆಯ ಕಾರಣ ಅವರನ್ನು ಸಫ್ದರ್ಜಂಗ್ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು.
ತಲೆತಿರುಗುವಿಕೆಯಿಂದಾಗಿ ತಿಹಾರ್ ಜೈಲಿನ ಸ್ನಾನಗೃಹದಲ್ಲಿ ಕುಸಿದು ಬಿದ್ದ ಜೈನ್ ಅವರನ್ನು ದೆಹಲಿಯ ಲೋಕನಾಯಕ ಜೈ ಪ್ರಕಾಶ್ ನಾರಾಯಣ (ಎಲ್ಎನ್ಜೆಪಿ) ಆಸ್ಪತ್ರೆಗೆ ದಾಖಲಿಸಿ ಐಸಿಯೂನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.