ಬೆಂಗಳೂರು, ಮೇ 27(DaijiworldNews/MS): 24 ಮಂದಿ ನೂತನ ಸಚಿವರ ಅಧಿಕೃತ ಪಟ್ಟಿ ಹೊರಬೀಳುತ್ತಿದ್ದಂತೆ ಮಂತ್ರಿ ಸ್ಥಾನದ ಪ್ರಬಲ ಆಕಾಂಕ್ಷಿಗಳಾಗಿದ್ದ ಕಾಂಗ್ರೆಸ್ ನಾಯಕರಲ್ಲಿ ಅಸಮಾಧಾನ ಭುಗಿಲೆದ್ದಿದೆ. ಅದು ಬೂದಿ ಮುಚ್ಚಿದ ಕೆಂಡದಂತಾಗಿದೆ.
ಅದರಲ್ಲಿಯೂ ಹಿರಿಯ ನಾಯಕರಾದ ಬಿಕೆ ಹರಿಪ್ರಸಾದ್, ಟಿಬಿ ಜಯಚಂದ್ರ, ವಿಜಯಾನಂದ ಕಾಶಪ್ಪನವರ್, ಲಕ್ಷ್ಮಣ ಸವದಿ ಸೇರಿದಂತೆ ಹಲವರಿಗೆ ಸಚಿವ ಸ್ಥಾನ ಕೈತಪ್ಪಿರುವುದು ಇದೀಗ ದೃಢಪಟ್ಟಿದೆ.
ಈ ನಡುವೆ ಮಂತ್ರಿ ಪದವಿ ನೀಡದ ಹಿನ್ನೆಲೆಯಲ್ಲಿ ತೀವ್ರ ಅಸಮಧಾನಗೊಂಡಿರುವ ಮೇಲ್ಮನೆ ವಿಪಕ್ಷ ನಾಯಕ, ವಿಧಾನ ಪರಿಷತ್ ಸದಸ್ಯತ್ವಕ್ಕೆ ಬಿಕೆ ಹರಿಪ್ರಸಾದ್ ರಾಜೀನಾಮೆ ನೀಡುವ ಸಾಧ್ಯತೆ ದಟ್ಟವಾಗಿದೆ ಎಂದು ವರದಿಯಾಗಿದೆ.
ನಮ್ಮ ಸೇವೆ ಬೇಡವೆಂದಾದರೆ ನಮ್ಮನ್ನು ಬಿಟ್ಟು ಕಳುಹಿಸಿಎಂದು ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುಜುನ ಖರ್ಗೆ ಹಾಗೂ ಎಐಸಿಸಿ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಅವರೈಗೆ ನೇರವಾಗಿ ಹೇಳಲಿದ್ದಾರೆ ಎಂದು ತಿಳಿದುಬಂದಿದೆ.
ಅವರಿಗೆ