ಬೆಂಗಳೂರು, ಮೇ 27(DaijiworldNews/HR): ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟಕ್ಕೆ ಇಂದು ಶನಿವಾರ 24 ಮಂದಿ ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.
ರಾಜಭವನದಲ್ಲಿ ನಡೆದ ಸರಳ ಸುಂದರ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್ ನೂತನ ಸಚಿವರಿಗೆ ಅಧಿಕಾರ ಮತ್ತು ಗೌಪ್ಯತೆಯ ಪ್ರತಿಜ್ಞಾ ವಿಧಿ ಬೋಧಿಸಿದರು.
ಸಚಿವರಾಗಿ ಹೆಚ್.ಕೆ ಪಾಟೀಲ್ ಹಾಗೂ ಕೃಷ್ಣಭೈರೇಗೌಡ, ಈಶ್ವರ ಖಂಡ್ರೆ, ಹೆಚ್ಸಿ ಮಹದೇವಪ್ಪ, ಕೆ.ವೆಂಕಟೇಶ್, ಚಲುವರಾಯಸ್ವಾಮಿ, ಕೃಷ್ಣಭೈರೇಗೌಡ, ಕೆಎನ್ ರಾಜಣ್ಣ, ದಿನೇಶ್ ಗುಂಡೂರಾವ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ರಾಜಭವನದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ಆಗಮಿಸಿ ನೂತನ ಸಚಿವರಿಗೆ ಶುಭಾಶಯ ಕೋರಿದ್ದಾರೆ.
ಮುಖ್ಯಮಂತ್ರಿ ಸಿದ್ಧರಾಮಯ್ಯ ಸಚಿವ ಸಂಪುಟಕ್ಕೆ ಮೊದಲ ಬಾರಿಗೆ 8 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು. ಇನ್ನು ಇಂದು ಅಥವಾ ನಾಳೆಯೇ ನೂತನ ಸಚಿವರಿಗೆ ಖಾತೆ ಹಂಚಿಕೆ ನಡೆಯುವ ಸಾಧ್ಯತೆ ಇದೆ.
ಸಚಿವರಾಗಿ ಹೆಚ್.ಕೆ ಪಾಟೀಲ್ ಹಾಗೂ ಕೃಷ್ಣಭೈರೇಗೌಡ, ಈಶ್ವರ ಖಂಡ್ರೆ, ಹೆಚ್ಸಿ ಮಹದೇವಪ್ಪ, ಕೆ.ವೆಂಕಟೇಶ್, ಚಲುವರಾಯಸ್ವಾಮಿ, ಕೃಷ್ಣಭೈರೇಗೌಡ, ಕೆಎನ್ ರಾಜಣ್ಣ, ದಿನೇಶ್ ಗುಂಡೂರಾವ್, ಶಹಾಪುರ ಶಾಸಕ ಸಚಿವರಾಗಿ ಶರಣಬಸಪ್ಪ ದರ್ಶನಾಪುರ, ಬಸವನ ಬಾಗೇವಾಡಿ ಶಾಸಕ ಶಿವಾನಂದ ಪಾಟೀಲ್, ಮುಧೋಳ ಶಾಸಕ ಆರ್.ಬಿ.ತಿಮ್ಮಾಪುರ, ದಾವಣಗೆರೆ ಉತ್ತರ ಕ್ಷೇತ್ರ ಶಾಸಕ ಎಸ್.ಎಸ್.ಮಲ್ಲಿಕಾರ್ಜುನ, ಕನಕಗಿರಿ ಕ್ಷೇತ್ರದ ಶಾಸಕ ಶಿವರಾಜ ತಂಗಡಗಿ, ಸೇಡಂ ಶಾಸಕ ಶರಣ ಪ್ರಕಾಶ್ ಪಾಟೀಲ್, ಭಟ್ಕಳ ಶಾಸಕ ಮಂಕಾಳು ವೈದ್ಯ, ಬೀದರ್ ಉತ್ತರ ಕ್ಷೇತ್ರದ ಶಾಸಕ ರಹೀಂ ಖಾನ್, ಹಿರಿಯೂರು ಶಾಸಕ ಡಿ.ಸುಧಾಕರ್, ಕಲಘಟಗಿ ಶಾಸಕ ಸಂತೋಷ್ ಲಾಡ್, ಎನ್. ಎಸ್.ಬೋಸರಾಜು, ಹೆಬ್ಬಾಳ ಕ್ಷೇತ್ರದ ಶಾಸಕ ಭೈರತಿ ಸುರೇಶ್, ಮಾಜಿ ಸಿಎಂ ಬಂಗಾರಪ್ಪ ಪುತ್ರ, ಸೊರಬ ಶಾಸಕ ಮಧು ಬಂಗಾರಪ್ಪ, ಚಿಂತಾಮಣಿ ಶಾಸಕ ಎಂ.ಸಿ.ಸುಧಾಕರ್, ಬಳ್ಳಾರಿ ಗ್ರಾಮಾಂತರ ಶಾಸಕ ಬಿ.ನಾಗೇಂದ್ರ ಅವರು ಪ್ರಮಾಣವಚನ ಸ್ವೀಕರಿಸಿದರು.