ಬೆಂಗಳೂರು, ಮೇ 27(DaijiworldNews/HR): ಆರೆಸ್ಸೆಸ್ ನಿಷೇಧಿಸುವ ಬಗ್ಗೆ ಸರ್ಕಾರ ಮಾತನಾಡಿಲ್ಲ. ಸಮಾಜದಲ್ಲಿ ಶಾಂತಿ, ಸೌಹಾರ್ದತೆಗೆ ಭಂಗ ತರುವ ಯಾವುದೇ ಸಂಘಟನೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.
ರಾಜ್ಯದಲ್ಲಿ ಸಂಘಟನೆಗಳನ್ನು ನಿಷೇಧಿಸುವ ಕುರಿತು ಮಾತನಾಡಿದ ಸಿದ್ದರಾಮಯ್ಯ, ಆರೆಸ್ಸೆಸ್ ನಿಷೇಧಿಸುವ ಬಗ್ಗೆ ಸರ್ಕಾರ ಮಾತನಾಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಇನ್ನು ಭಾರತದ ಪ್ರಥಮ ಪ್ರಧಾನಮಂತ್ರಿ ಪಂಡಿತ್ ಜವಾಹರಲಾಲ್ ನೆಹರೂ ಅವರ 59ನೇ ಪುಣ್ಯತಿಥಿಯ ಅಂಗವಾಗಿ ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ನೆಹರೂರವರ ಭಾವಚಿತ್ರಕ್ಕೆ ಕಾಂಗ್ರೆಸ್ ನಾಯಕರು ಪುಷ್ಪ ನಮನದ ಮೂಲಕ ಗೌರವ ಸಲ್ಲಿಸಿದ್ದಾರೆ.