ನವದೆಹಲಿ, ಮೇ 28 (DaijiworldNews/KH): ಕುಸ್ತಿಪಟುಗಳು ಕುಸ್ತಿ ಫೆಡರೇಶನ್ ಆಫ್ ಇಂಡಿಯಾ ಮುಖ್ಯಸ್ಥ ಬ್ರಿಜ್ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ಬಂಧಿಸುವಂತೆ ಒತ್ತಾಯಿಸಿ ನೂತನ ಸಂಸತ್ ಭವನದತ್ತ ಮೆರವಣಿಗೆ ಮಾಡಲು ಪ್ರಯತ್ನಿಸುತ್ತಿದ್ದಾಗ ದೆಹಲಿ ಪೊಲೀಸರು ತಡೆದು ವಶಕ್ಕೆ ಪಡೆದಿದ್ದಾರೆ.
ಕುಸ್ತಿ ಫೆಡರೇಶನ್ ಆಫ್ ಇಂಡಿಯಾ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ಲೈಂಗಿಕ ಕಿರುಕುಳ ಮತ್ತು ಬೆದರಿಕೆ ಆರೋಪದ ಮೇಲೆ ಬಂಧಿಸುವಂತೆ ಒತ್ತಾಯಿಸಿ ಕುಸ್ತಿಪಟುಗಳ ಗುಂಪು ಕಳೆದ ತಿಂಗಳಿನಿಂದ ಧರಣಿ ನಡೆಸುತ್ತಿದ್ದಾರೆ.
ಕುಸ್ತಿಪಟುಗಳು ಭಾರತದ ಹೊಸ ಸಂಸತ್ತನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸುತ್ತಿದ್ದಂತೆ ಮೆರವಣಿಗೆ ಮಾಡಲು ಪ್ರಯತ್ನಿಸಿದರು ಆದರೆ ನೂರಾರು ಪೊಲೀಸ್ ಸಿಬ್ಬಂದಿ ಎಲ್ಲರನ್ನು ತಡೆದರು ವಶಕ್ಕೆ ಪಡೆದುಕೊಂಡವರಲ್ಲಿ ಒಲಂಪಿಕ್ ಕಂಚಿನ ಪದಕ ವಿಜೇತರಾದ ಸಾಕ್ಷಿ ಮಲಿಕ್ ಮತ್ತು ಬಜರಂಗ್ ಪುನಿಯಾ ಮತ್ತು ಎರಡು ಬಾರಿ ವಿಶ್ವ ಚಾಂಪಿಯನ್ಶಿಪ್ ಪದಕ ವಿಜೇತ ವಿನೇಶ್ ಫೋಗಟ್ ಸೇರಿದ್ದಾರೆ.