ಬೆಂಗಳೂರು, ಮೇ 30 (DaijiworldNews/HR): ಕಾಂಗ್ರೆಸ್ನ ಐದು ಗ್ಯಾರಂಟಿಗಳ ಅನುಷ್ಠಾನಕ್ಕೆ ಸಿದ್ಧತೆ ಪ್ರಾರಂಭಗೊಂಡಿದ್ದು, ಜೂ. 1ರಂದು ಮಾರ್ಗಸೂಚಿ ಹೊರಬೀಳುವ ಸಾಧ್ಯತೆ ಇದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ಶಕ್ತಿಭವನದಲ್ಲಿ ಗ್ಯಾರಂಟಿ ಅನುಷ್ಠಾನ ಸಂಬಂಧ ಹಣಕಾಸು ಮತ್ತಿತರ ಇಲಾಖೆಗಳ ಅಧಿಕಾರಿಗಳ ಜತೆ ಸಭೆ ನಡೆಸಿ ಎರಡು ದಿನಗಳಲ್ಲಿ ಮಾರ್ಗಸೂಚಿ ಸಿದ್ಧಪಡಿಸಲು ಸೂಚನೆ ನೀಡಿದ್ದಾರೆ.
ಇನ್ನು ಐದು ಗ್ಯಾರಂಟಿ ಯೋಜನೆಗಳಿಗೆ 50 ಸಾವಿರ ಕೋಟಿ ರೂ.ಗಳ ಅಗತ್ಯವಿದ್ದು, ಸಂಪನ್ಮೂಲ ಕ್ರೋಡೀಕರಣದ ಜತೆಗೆ ಸಾಲದ ಮೊರೆ ಹೋಗುವುದು ಅನಿವಾರ್ಯವಾಗಿದೆ.
ಗ್ಯಾರಂಟಿ ಯೋಜನೆಗಳ ಜಾರಿ ಸಂಬಂಧ ಬುಧವಾರ ಸಿಎಂ ಸಿದ್ದರಾಮಯ್ಯ ಮತ್ತೂಮ್ಮೆ ಸಚಿವರ ಜತೆ ಸಮಾಲೋಚನೆ ನಡೆಸಲಿದ್ದು, ಗುರುವಾರ ನಡೆಯುವ ಸಂಪುಟ ಸಭೆಯಲ್ಲಿ ಅಧಿಕೃತ ತೀರ್ಮಾನ ಕೈಗೊಳ್ಳಲಾಗುವುದು ಎಂದು ವರದಿಯಾಗಿದೆ.