ಇಂಫಾಲ್, ಜೂ 01 (DaijiworldNews/HR): ಮಣಿಪುರದಲ್ಲಿ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಣಿಪುರ ಹಿಂಸಾಚಾರ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆದೇಶ ನೀಡಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಅವರು, ಮಣಿಪುರ ಹಿಂಸಾಚಾರದ ಬಗ್ಗೆ ಮಾಜಿ ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದ ಸಮಿತಿ ತನಿಖೆ ನಡೆಸಲಿದೆ ಮತ್ತು ಶಾಂತಿ ಸಮಿತಿಯನ್ನು ರಚಿಸಲಾಗುವುದು ಎಂದಿದ್ದಾರೆ.
ಇನ್ನು ಮಣಿಪುರ ಹಿಂಸಾಚಾರದಲ್ಲಿ ಮೃತಪಟ್ಟವರ ಕುಟುಂಬದವರಿಗೆ 10 ಲಕ್ಷ ರೂ. ಪರಿಹಾರ ನೀಡಲಾಗಿದ್ದು, ಮೃತರ ಕುಟುಂಬದ ಒಬ್ಬ ಸದಸ್ಯರಿಗೆ ಉದ್ಯೋಗ ಕೊಡಿಸಲಾಗುವುದು ಮತ್ತು ಪರಿಹಾರದ ಮೊತ್ತವನ್ನು ಕೇಂದ್ರ ಹಾಗೂ ರಾಜ್ಯ ಸಮಾನವಾಗಿ ಭರಿಸಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮಣಿಪುರದಲ್ಲಿ ಭಾನುವಾರ ನಡೆದ ಹಿಂಸಾಚಾರದಲ್ಲಿ ಪೊಲೀಸರು ಸೇರಿದಂತೆ ಐವರು ಮೃತಪಟ್ಟಿದ್ದಾರೆ. ಈ ಮೂಲಕ ಕಳೆದ 1 ತಿಂಗಳ ಸಾವಿನ ಸಂಖ್ಯೆ 80ಕ್ಕೆ ಏರಿದ್ದು ಮಣಿಪುರದ ಪರಿಸ್ಥಿತಿಯು ಮುಚ್ಚಿದ ಕೆಂಡದಂತಾಗಿದ್ದರಿಂದ ನಿನ್ನೆಯ ವರೆಗೆ ರಾಜ್ಯಾದ್ಯಂತ ಇಂಟರ್ನೆಟ್ ಸೇವೆಯನ್ನು ಸ್ಥಗಿತಗೊಳಿಸಲಾಗಿತ್ತು.