ಒಡಿಶಾ, ಜೂ 04 (DaijiworldNews/MS): ರೈಲು ಅಪಘಾತದ ಮೂಲ ಕಾರಣವನ್ನು ಗುರುತಿಸಲಾಗಿದೆ ಎಂದು ರೈಲ್ವೆ ಸಚಿವ ಅಶ್ವಿನ್ ವೈಷ್ಣವ್ ಹೇಳಿದ್ದಾರೆ.
ದುರಂತದ ಸ್ಥಳಕ್ಕೆ ಭೇಟಿ ನೀಡಿ ಮಾತನಾಡಿದ ಅವರು, ನಾವು ಹಳಿಗಳನ್ನು ಪುನಃಸ್ಥಾಪಿಸಲು ಪ್ರಯತ್ನಿಸುತ್ತೇವೆ. ಎಲ್ಲಾ ಮೃತದೇಹಗಳನ್ನು ಸ್ಥಳಾಂತರಿಸಲಾಗಿದೆ. ಬುಧವಾರ ಬೆಳಗ್ಗೆಯೊಳಗೆ ಎಲ್ಲಾ ಹಳಿಗಳ ರಿಪೇರಿ ಕಾರ್ಯ ಮುಗಿಯುವುದು ನಮ್ಮ ಗುರಿಯಾಗಿದೆ ಎಂದಿದ್ದಾರೆ.
ಆಗ್ನೇಯ ರೈಲ್ವೆಯ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ (ಸಿಪಿಆರ್ಒ) ಆದಿತ್ಯ ಕುಮಾರ್ ಅವರು, ಮಗುಚಿ ಬಿದ್ದ ಬೋಗಿಗಳನ್ನು ಹೊರತೆಗೆಯಲಾಗಿದ್ದು, ಒಂದು ಕಡೆಯಿಂದ ಟ್ರ್ಯಾಕ್ಗೆ ಸಂಪರ್ಕ ಕಲ್ಪಿಸುವ ಕೆಲಸ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.
ಒಡಿಶಾ ಬಾಲಸೋರ್ ನಲ್ಲಿ ನಡೆದ ಭೀಕರ ರೈಲು ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 288 ಏರಿಕೆಯಾಗಿದ್ದು 1,000 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು.