ನವದೆಹಲಿ,ಜೂ 08 (DaijiworldNews/MS): ಭಾರತೀಯ ರಿಸರ್ವ್ ಬ್ಯಾಂಕ್ ಆರ್ಥಿಕ ನೀತಿಯನ್ನು ಪ್ರಕಟಿಸಿದ್ದು, ಕಳೆದ ಬಾರಿ ರೆಪೋ ದರ ಏರಿಸದೇ ಯಥಾಸ್ಥಿತಿ ಕಾಯ್ದುಕೊಳ್ಳುವ ಅಚ್ಚರಿಯ ನಿರ್ಣಯ ಕೈಕೊಂಡಂತೆ, ಈ ಬಾರಿಯೂ ರೆಪೋ ದರದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ.
ಜೂನ್ 6ರಿಂದ ಆರಂಭವಾಗಿರುವ ಆರ್ಬಿಐನ ಹಣಕಾಸು ನೀತಿ ಪರಾಮರ್ಶೆ ಸಭೆಯು ಗುರುವಾರ (ಜೂ. 8) ಮುಕ್ತಾಯವಾಗಿದ್ದು ಇಂದು ಮುಕ್ತಾಗೊಂಡ ಬಳಿಕ ಆರ್ಬಿಐ ಗವರ್ನರ್ ಶಕ್ತಿಕಾಂತ ದಾಸ್ ಪತ್ರಿಕಾಗೋಷ್ಠಿ ನಡೆಸಿ ಸಭೆಯ ನಿರ್ಧಾರಗಳನ್ನು ಪ್ರಕಟಿಸಿದರು.
ಹಣದುಬ್ಬರ ಕಡಿಮೆ ಆಗಿರುವುದರಿಂದ ಈ ಬಾರಿ ಬಡ್ಡಿ ದರ ಏರಿಕೆಯನ್ನು ನಿಲ್ಲಿಸಲು ಸಾಧ್ಯವಾಗಿದೆತೆ ರೆಪೋ ದರವನ್ನು ಶೇ. 6.5ರಲ್ಲಿ ಮುಂದುವರಿಸಲು ನಿರ್ಧರಿಸಲಾಗಿದೆ ಎಂದು ಹೇಳಿದರು.