ಬೆಂಗಳೂರು, ಜೂ 08 (DaijiworldNews/MS): ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಏಕೈಕ ಪುತ್ರಿ ವಾಙ್ಮಯಿ ಅವರ ವಿವಾಹ ಪ್ರತೀಕ್ ಎಂಬವರ ಜೊತೆ ಉಡುಪಿಯ ಅದಮಾರು ಮಠದ ಬ್ರಾಹ್ಮಣ ಸಂಪ್ರದಾಯ ಪ್ರಕಾರ ಬೆಂಗಳೂರಿನಲ್ಲಿ ನೆರವೇರಿತು.
ಬೆಂಗಳೂರಿನ ಟ್ಯಾಮರಿಂಡ್ ಟ್ರೀ ನಲ್ಲಿ ವಿವಾಹ ಮತ್ತು ಆರತಕ್ಷತೆ ನಡೆದಿದ್ದು ಅದಮಾರು ಮಠದ ವಿಶ್ವಪ್ರಿಯ ತೀರ್ಥ ಶ್ರೀಪಾದರು ಮತ್ತು ಈಶಪ್ರಿಯ ತೀರ್ಥ ಶ್ರೀಪಾದರು ವಧು- ವರರನ್ನು ಹರಸಿದ್ದಾರೆ. ಮಧುಪರ್ಕ, ಸೀರೆ, ಶಾಲು, ಗಂಧ ಪ್ರಸಾದವನ್ನು ಮಠದ ವ್ಯವಸ್ಥಾಪಕರಾದ ಗೋವಿಂದ ರಾಜರು ಮತ್ತು ಶಿಷ್ಯರು ಮಂತ್ರಘೋಷದ ಮೂಲಕ ನೀಡಿ ಹರಸಿದರು.
ಇದೇ ವೇಳೆ ಶ್ರೀ ಈಶಪ್ರಿಯ ತೀರ್ಥ ಶ್ರೀಪಾದರು ಅನುಗ್ರಹಿಸಿ ಕಳುಹಿಸಿದ ಉಡುಪಿ ಸೀರೆಯನ್ನು ಶ್ರೀಮತಿ ನಿರ್ಮಲ ಸೀತಾರಾಮನ್ ಅವರಿಗೆ ನೀಡಲಾಯಿತು. ಸಚಿವೆ ನಿರ್ಮಲಾ ಅವರು ಹಿಂದಿನಿಂದಲೂ ಉಡುಪಿ ಮಠದ ಭಕ್ತರಾಗಿದ್ದಾರೆ. ಅವರ ಇಚ್ಛೆಯಂತೆ ಪುತ್ರಿಯ ವಿವಾಹ ನೆರವೇರಿದೆ.