ಬೆಂಗಳೂರು, ಜೂ 08 (DaijiworldNews/SM): ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ ಅನಿರೀಕ್ಷಿತ ಸೋಲಾಗಿರುವುದು ಪಕ್ಷದ ಬಗ್ಗೆ ಜನರಿಗೆ ಇರುವ ಒಲವು ಎಷ್ಟು ಎಂಬುವುದನ್ನು ತಿಳಿಸಿದೆ. ಫಲಿತಾಂಶ ಹೊರಬಿದ್ದು ಒಂದು ತಿಂಗಳಾಗುವ ಹೊತ್ತಿನಲ್ಲಿ ಬಿಜೆಪಿಯು ನೂತನ ಶಾಸಕರು ಮತ್ತು ಪರಾಜಿತ ಅಭ್ಯರ್ಥಿಗಳ ಅವಲೋಕನ ಸಭೆಯನ್ನು ಗುರುವಾರ ಮಾಡಲಾಗಿದೆ. ಈ ವೇಳೆ ಸೋಲಿಗೆ ಸಂಬಂಧಿಸಿದ ಸಾಲು ಸಾಲು ಕಾರಣಗಳು ಬಹಿರಂಗಗೊಂಡವು.
ನಗರದ ಮಲ್ಲೇಶ್ವರಂನ ರಾಜ್ಯ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಪರಾಜಿತ ಅಭ್ಯರ್ಥಿಗಳು ಬಿಜೆಪಿ ಸೋಲಿಗೆ ಕಾರಣಗಳನ್ನು ಬಿಚ್ಚಿಟ್ಟಿದ್ದಾರೆ. ಜೊತೆಗೆ ನಾಯಕರ ವಿರುದ್ಧ ಅಸಮಾಧಾನ ಹೊರ ಹಾಕಿದ್ದಾರೆ.
ಬಿಜೆಪಿ ಸೋಲಿಗೆ ಪರಾಜಿತ ಅಭ್ಯರ್ಥಿಗಳ ಕಾರಣಗಳು?
ಕಾಂಗ್ರೆಸ್ನ ಗ್ಯಾರಂಟಿ ಯೋಜನೆಗಳು
ಒಳ ಮೀಸಲಾತಿ ಹಂಚಿಕೆಯ ಒಳ ಏಟು
40% ಕಮೀಷನ್ ಆರೋಪ ಸೇರಿ ಕೆಲವು ಭ್ರಷ್ಟಾಚಾರ ಆರೋಪ ಪ್ರಕರಣಗಳು
ಅಲ್ಲಲ್ಲಿ ಬೀಸಿದ ವಿರೋಧಿ ಅಲೆ
ಟಿಕೆಟ್ ಹಂಚಿಕೆಯಲ್ಲಿನ ವಿಳಂಬ
ಹೈಕಮಾಂಡ್ ಮೇಲಿನ ಹೆಚ್ಚಿನ ಅವಲಂಬನೆ
ಸಚಿವರು ಸರ್ಕಾರ ಇದ್ದಾಗ ಸರಿಯಾಗಿ ಸ್ಪಂದಿಸಲಿಲ್ಲ
ಪಕ್ಷದ ಮುಖಂಡರು ಅಭ್ಯರ್ಥಿಗಳ ಮಾತಿಗೆ ಬೆಲೆ ಕೊಡಲಿಲ್ಲ
ಲಕ್ಷ್ಮಣ ಸವದಿ ಪಕ್ಷ ಬಿಟ್ಟಿದ್ದು ಕಲ್ಯಾಣ ಕರ್ನಾಟಕ ಭಾಗದಲ್ಲಿ ಹೊಡೆತ ಆಯಿತು
ಚುನಾವಣೆ ಸಂದರ್ಭದಲ್ಲಿ ಅಕ್ಕಿ ಕೊಡುವುದನ್ನು ಕಡಿಮೆ ಮಾಡಿದ್ದೂ ಪ್ರಮುಖ ಕಾರಣ
ನಾಯಕರು ಮಾಡಿರುವ ತಪ್ಪಿನಿಂದ ನಾವು ಬಲಿಯಾದೆವು ಎಂದು ಪರಾಜಿತ ಅಭ್ಯರ್ಥಿಗಳು ಅಸಮಾಧಾನ ಹೊರ ಹಾಕಿದ್ದಾರೆ.