ಮುಂಬೈ, ಜೂ 09 (DaijiworldNews/MS): ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ(ಎನ್ಸಿಪಿ) ಅಧ್ಯಕ್ಷ ಶರದ್ ಪವಾರ್ ಅವರಿಗೆ ಶುಕ್ರವಾರ ಟ್ವಿಟರ್ ಮೂಲಕ ಕೊಲೆ ಬೆದರಿಕೆ ಹಾಕಲಾಗಿದೆ.
ಇದರ ಬೆನ್ನಲ್ಲೇ ಸಂಸದೆ ಸುಪ್ರಿಯಾ ಸುಳೆ ನೇತೃತ್ವದ ಪಕ್ಷದ ಮುಖಂಡರ ನಿಯೋಗ ಮುಂಬೈ ಪೊಲೀಸ್ ಕಮಿಷನರ್ ಕಚೇರಿಗೆ ತೆರಳಿ ಶೀಘ್ರ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದೆ.
ಬೆದರಿಕೆ ಹಾಕಿರುವ ಟ್ವಿಟರ್ ಹ್ಯಾಂಡಲ್ ವಿರುದ್ಧ ಪೊಲೀಸರು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ಈ ಹಿಂದೆ ಶರದ್ ಪವಾರ್ ಅವರಿಗೆ ಕೊಲೆ ಬೆದರಿಕೆ ಹಾಕಲಾಗಿತ್ತು. ಈ ಸಂಬಂಧ ಪೊಲೀಸರು ಎನ್ ಸೋನಿ(45) ಎಂಬ ಆರೋಪಿಯನ್ನು ಬಂಧಿಸಿದ್ದರು.