ರಾಮನಗರ, ಜೂ 12 (DaijiworldNews/HR): ನನಗೆ ರಾಜಕಾರಣದ ಮೇಲೆ ಒಲವಿಲ್ಲ. ಕಳೆದ ಬಾರಿಯೂ ನನಗೆ ಚುನಾವಣೆ ಎದುರಿಸುವ ಆಸಕ್ತಿ ಇರಲಿಲ್ಲ.ಆದರೆ ಕಾರ್ಯಕರ್ತರ ಒತ್ತಾಸೆಯಿಂದ ರಾಜಕಾರಣದಲ್ಲಿದ್ದೇನೆ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಹೆಳಿದ್ದಾರೆ.
ಕಾಂಗ್ರೆಸ್ ವಿರುದ್ಧದ 640ಕೋಟಿ ಭ್ರಷ್ಟಾಚಾರ ಆರೋಪ ವಿಚಾರದ ಕುರಿತು ಪ್ರತಿಕ್ರಿಯಿಸಿದ ಅವರು, ನೀವು ಬಿಜೆಪಿ ವಿರುದ್ಧ 40% ಅಂತ ಡಂಗೂರ ಹೊಡೆದ್ರಲ್ಲ ಯಾವ ಸಾಕ್ಷಿ ಇಟ್ಟಿದ್ರಿ.? ಅವನ್ಯಾರೋ ಗುತ್ತಿಗೆದಾರ ದೂರು ಕೊಟ್ರಲ್ಲ, ಅವರು ಸಾಕ್ಷಿ ಇಟ್ಟಿದ್ರಾ.? ನೀವು 40% ಬಗ್ಗೆ ಆರೋಪಿಸಿದ್ರಲ್ಲ ಯಾಕೆ ಲೋಕಾಯುಕ್ತಕ್ಕೆ ದೂರು ಕೊಡಲಿಲ್ಲ. ಈಗ ಅಧಿಕಾರದಲ್ಲಿದ್ದೀರಲ್ಲಾ ಅದರ ಬಗ್ಗೆ ತನಿಖೆ ಮಾಡಿಸಿ ಎಂದರು.
ಇನ್ನು ನಂದುಬಿಡಿ ಹಾಲಿ ಸಂಸದರ ಕಥೆಯೇ ಕೇಳಿ. ಭ್ರಷ್ಟಾಚಾರದ ಮಧ್ಯೆ ಚುನಾವಣೆ ಬೇಡ ಅಂತಿದ್ದಾರೆ. ಅಂತವರೇ ಚುನಾವಣೆ ಬೇಡ ಅಂತ ಹೇಳುತ್ತಿರುವಾಗ ನಮ್ದೆಲ್ಲ ಯಾವ ಲೆಕ್ಕ ಎಂದು ಸಂಸದ ಡಿ.ಕೆ.ಸುರೇಶ್ ಹೆಸರೇಳದೆ ಟಾಂಗ್ ನೀಡಿದ್ದಾರೆ.
ಲೋಕಸಭಾ ಚುನಾವಣಾ ಬಿಜೆಪಿ ಜೊತೆ ಜೆಡಿಎಸ್ ಮೈತ್ರಿ ಚರ್ಚೆ ವಿಚಾರಕ್ಕೆ ಪ್ರತಿಕ್ರಿಯಿಸಿ, ರಾಜಕಾರಣದಲ್ಲಿ ಊಹಾಪೋಹ ಮಾಮೂಲಿ. ಇದೆಲ್ಲಾ ಗಾಳಿ ಸುದ್ದಿ, ಆ ರೀತಿಯ ಯಾವುದೇ ಚರ್ಚೆ ಆಗುತ್ತಿಲ್ಲ. ಈ ವಿಚಾರವನ್ನು ನನ್ನ ಮುಂದೆ ಯಾರೂ ಪ್ರಸ್ತಾಪ ಮಾಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.