ಹಾವೇರಿ, ಜೂ 12 (DaijiworldNews/HR): ಹಾವೇರಿಯ ಹಾನಗಲ್ ತಾಲ್ಲೂಕಿನ ಕುಸನೂರು ಗ್ರಾಮದಲ್ಲಿ ಮಿತಿ ಮೀರಿ ಜನ ತುಂಬಿದ್ದ ಸಾರಿಗೆ ಬಸ್ನಿಂದ ರಸ್ತೆಗೆ ಬಿದ್ದು 14 ವರ್ಷದ ಬಾಲಕಿಯೊಬ್ಬಳು ಸಾವನ್ನಪ್ಪಿದ ಘಟನೆ ಸಂಭವಿಸಿದೆ.
ಮಧು ಕುಂಬಾರ ಮೃತ ಬಾಲಕಿಯಾಗಿದ್ದಾಳೆ.
ಸಾರಿಗೆ ಸಂಸ್ಥೆಗೆ ಸೇರಿದ ಈ ಬಸ್ ಪ್ರಯಾಣಿಕರಿಂದ ತುಂಬಿ ತುಳುಕುತ್ತಿದ್ದು, ಬಾಲಕಿ ಬಾಗಿಲ ಬಳಿಯೇ ನಿಂತು ಪ್ರಯಾಣಿಸುತ್ತಿದ್ದಾಗ ದುರಾದೃಷ್ಟವಶಾತ್ ಆಯತಪ್ಪಿ ಕೆಳಗಡೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಆಕೆ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ.
ಇನ್ನು ಬಾಲಕಿ ವಾಸನ ಗ್ರಾಮದಿಂದ ಕುಸನೂರು ಗ್ರಾಮದ ಶಾಲೆಗೆ ಬಸ್ನಲ್ಲಿ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.