ಗಂಗಾವತಿ, ಜೂ13 (DaijiworldNews/HR): ಶಾಸಕ ಜನಾರ್ದನ ರೆಡ್ಡಿ ಮತ್ತು ಪತ್ನಿ ಅರುಣಾ ಲಕ್ಷ್ಮೀ ರೆಡ್ಡಿ ಅವರ ಆಸ್ತಿ ಜಪ್ತಿ ಮಾಡುವಂತೆ ಸಿಬಿಐ ವಿಶೇಷ ಕೋರ್ಟ್ ಆದೇಶ ಹೊರಡಿಸಿ ಶಾಕ್ ನೀಡಿದೆ.
ಜನಾರ್ದನ ರೆಡ್ಡಿ ಮತ್ತು ಪತ್ನಿ ಅರುಣಾ ಲಕ್ಷ್ಮೀ ರೆಡ್ಡಿ ಅವರ ಕ್ರಿಮಿನಲ್ ಕೇಸ್ ಮುಗಿಯುವವರೆಗೆ ಒಟ್ಟು 77 ಆಸ್ತಿಗಳನ್ನು ಮುಟ್ಟುಗೋಲು ಹಾಕುವಂತೆ ಆದೇಶ ಹೊರಡಿಸಿದೆ.
ಇನ್ನು ಜನಾರ್ದನ ರೆಡ್ಡಿ ದಂಪತಿಗೆ ಸೇರಿದ ಒಟ್ಟು 124 ಆಸ್ತಿಗಳ ಜಪ್ತಿ ಕೋರಿ ಸಿಬಿಐ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿತ್ತು.
ಇದೀಗ ನ್ಯಾಯಾಲಯ ಭ್ರಷ್ಟಾಚಾರ ತಡೆ ಕಾಯ್ದೆ, ಕ್ರಿಮಿನಲ್ ಲಾ ತಿದ್ದುಪಡಿ ಕಾಯ್ದೆ ಅಡಿಯಲ್ಲಿ ಒಟ್ಟು 77 ಆಸ್ತಿಗಳನ್ನು ಜಪ್ತಿ ಮಾಡುವಂತೆ ಆದೇಶ ಹೊರಡಿಸಿದ್ದು, ಇದು ಬಳ್ಳಾರಿ ಗಣಿಧನಿ ರೆಡ್ಡಿ ಹಾಗೂ ಪತ್ನಿ ಅರುಣಾ ಲಕ್ಷ್ಮಿಗೆ ತಲೆನೋವಾಗಿ ಪರಿಣಮಿಸಿದೆ.