ಶ್ರೀನಗರ, ಜೂ 16 (DaijiworldNews/HR): ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಎನ್ಕೌಂಟರ್ನಲ್ಲಿ ಐವರು ವಿದೇಶಿ ಭಯೋತ್ಪಾದಕರು ಸಾವನ್ನಪ್ಪಿರುವ ಘಟನೆ ಜಮ್ಮು ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಶುಕ್ರವಾರ ಎಂದು ಕಾಶ್ಮೀರ ವಲಯ ಪೊಲೀಸರು ತಿಳಿಸಿದ್ದಾರೆ.
ಎನ್ಕೌಂಟರ್ನಲ್ಲಿ ಐವರು ವಿದೇಶಿ ಭಯೋತ್ಪಾದಕರು ಹತರಾಗಿದ್ದು, ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಕಾಶ್ಮೀರ ಎಡಿಜಿಪಿ ವಿಜಯ್ ಕುಮಾರ್ ಎಎನ್ಐಗೆ ತಿಳಿಸಿದ್ದಾರೆ.
ಇನ್ನು ಎಲ್ಒಸಿ ಬಳಿಯ ಜುಮಗುಂಡ್ ಪ್ರದೇಶದಲ್ಲಿ ಭಯೋತ್ಪಾದಕರ ಬಗ್ಗೆ ಭದ್ರತಾ ಪಡೆಗಳು ನಿರ್ದಿಷ್ಟ ಮಾಹಿತಿ ಪಡೆದ ನಂತರ ಪೊಲೀಸರು ಹಾಗೂ ಸೈನಿಕರು ಉಗ್ರರ ಮೇಲೆ ಜಂಟಿ ಕಾರ್ಯಾಚರಣೆ ನಡೆಸಿ ಗುಂಡಿನ ದಾಳಿ ನಡೆಸಲಾಯಿತು.