ಚೆನ್ನೈ, ಜೂ 16 (DaijiworldNews/MS): ತಮಿಳುನಾಡು ಬಿಜೆಪಿ ರಾಜ್ಯ ಕಾರ್ಯದರ್ಶಿ ಎಸ್.ಜಿ.ಸೂರ್ಯ ಅವರನ್ನು ಶುಕ್ರವಾರ ಮತ್ತು ಶನಿವಾರ ನಡುವಿನ ರಾತ್ರಿಯಲ್ಲಿ ಮಧುರೈ ಪೊಲೀಸರು ಬಂಧಿಸಿದ್ದಾರೆ.
ಮಧುರೈ ಜಿಲ್ಲಾ ಸೈಬರ್ ಕ್ರೈಂ ಪೊಲೀಸರು ಚೆನ್ನೈನಲ್ಲಿ ಬಂಧಿಸಿದ್ದುಬಂಧನಕ್ಕೆ ಕಾರಣಗಳು ಇನ್ನೂ ಸ್ಪಷ್ಟವಾಗಿಲ್ಲ. ಆದರೂ ಮಧುರೈ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್ವಾದಿ) ಸಂಸದ ಸು ವೆಂಕಟೇಶನ್ ವಿರುದ್ಧ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಬಂಧಿಸಲಾಗಿದೆ ಎಂದು ಕೆಲವು ಮೂಲಗಳು ತಿಳಿಸಿವೆ.
ಇನ್ನು, ಬಿಜೆಪಿ ರಾಜ್ಯ ಕಾರ್ಯದರ್ಶಿ ಎಸ್ ಜಿ ಸೂರ್ಯ ಅವರ ಬಂಧನವು ಅತ್ಯಂತ ಖಂಡನೀಯವಾಗಿದೆ. ಕಮ್ಯುನಿಸ್ಟರು, ಡಿಎಂಕೆ ಮಿತ್ರಪಕ್ಷಗಳ ಅಸಹ್ಯ ದ್ವಂದ್ವ ನೀತಿಯನ್ನು ಬಹಿರಂಗಪಡಿಸುವುದು ಅವರ ಏಕೈಕ ತಪ್ಪು..ಈ ಬಂಧನಗಳು ನಮ್ಮನ್ನು ತಡೆಯುವುದಿಲ್ಲ ಎಂದು ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ ಅಣ್ಣಾಮಲೈ ಟ್ವೀಟ್ ಮಾಡಿದ್ದಾರೆ.