ಛತ್ತೀಸ್ಗಢ, ಜೂ 18 (DaijworldNews/HR): ವೇಗವಾಗಿ ಬಂದ ಬಸ್ ಸೇತುವೆಗೆ ಡಿಕ್ಕಿ ಹೊಡೆದು 26 ಜನರು ಗಾಯಗೊಂಡಿರುವ ಘಟನೆ ಛತ್ತೀಸ್ಗಢದ ಘರ್ಘೋಡಾ ಪ್ರದೇಶದ ಬಳಿ ನಡೆದಿದ್ದು, ವಾಹನ ಚಲಾಯಿಸುವಾಗ ಫೋನ್ನಲ್ಲಿ ಮಾತನಾಡುವುದರಲ್ಲಿ ನಿರತರಾಗಿದ್ದರಿಂದ ಅಪಘಾತ ಸಂಭವಿಸಿದೆ ಎನ್ನಲಾಗಿದೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ತನಿಖೆ ನಡೆಸಿದ್ದಾರೆ. ಚಾಲಕ ಫೋನಿನಲ್ಲಿ ಮಾತನಾಡುತ್ತಾ ವಾಹನ ಚಲಾಯಿಸಿದ ಪರಿಣಾಮ ಈ ಘಟನೆ ನಡೆದಿದೆ ಎಂದು ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ.
ಇನ್ನು ಏಪ್ರಿಲ್ನಲ್ಲಿ ಇದೇ ರೀತಿಯ ಅಪಘಾತದಲ್ಲಿ ಛತ್ತೀಸ್ಗಢದಲ್ಲಿ ಬಸ್ ಪಲ್ಟಿಯಾಗಿ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಸುಮಾರು 40 ಜನರು ಗಾಯಗೊಂಡಿದ್ದರು.
ಮತ್ತೊಂದು ಘಟನೆ ಮಸ್ಸೂರಿ-ಡೆಹ್ರಾಡೂನ್ ರಸ್ತೆಯಲ್ಲಿ ಬಸ್ ಕಂದಕಕ್ಕೆ ಬಿದ್ದ ಪರಿಣಾಮ ಬಸ್ ಚಾಲಕ ಸೇರಿದಂತೆ 22 ಜನರು ಗಾಯಗೊಂಡಿದ್ದರು.