ಬೆಂಗಳೂರು, ಜೂ. 19 (DaijiworldNews/SM): ಕಾಂಗ್ರೆಸ್ ಸರ್ಕಾರ ಅಕ್ಕಿ ನೀಡಲು ಪೂರ್ವ ಸಿದ್ದತೆ ಮಾಡಿಕೊಳ್ಳದ ಕರ್ನಾಟಕ ಕಾಂಗ್ರೆಸ್ ಸರ್ಕಾರ ಇದೀಗ ತಮ್ಮ ವೈಫಲ್ಯಗಳನ್ನು ಮುಚ್ಚಿಕೊಳ್ಳಲು ಕೇಂದ್ರ ಸರ್ಕಾರದ ವಿರುದ್ಧ ರಾಜಕೀಯ ಪ್ರೇರಿತ ಪ್ರತಿಭಟನೆ ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದರು.
ಸೋಮವಾರ ಬೆಂಗಳೂರಿನ ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದ ಗೊಂದಲದ ಗೂಡಾಗಿದೆ. ಉಚಿತ ಬಸ್ ಪ್ರಯಾಣ ಗ್ಯಾರಂಟಿ ಯೋಜನೆಗಳು ಎಲ್ಲವು ಅದ್ವಾನ ಆಗಿದೆ. ರಾಜ್ಯದಲ್ಲಿ ಸರಿಯಾಗಿ ಬಸ್ ಗಳ ವ್ಯವಸ್ಥೆ ಮಾಡದೇ ಫ್ರೀ ಬಸ್ ಯೋಜನೆ ಅಂದರೆ ಹೇಗೆ? ಎಂದು ಅವರು ಸರ್ಕಾರವನ್ನು ಪ್ರಶ್ನಿಸಿದರು.
ಸರಿಯಾದ ಬಸ್ ಸೇವೆ ಒದಗಿಸದೇ ಇರುವುದರಿಂದ ಸಾರ್ವಜನಿಕರು ಬಾಯಿಗೆ ಬಂದಹಾಗೆ ಬೈಯುತ್ತಿದ್ದಾರೆ. ಕೆಲಸ ಮಾಡಲು ಆಗುತ್ತಿಲ್ಲ ಎಂದು ಅಧಿಕಾರಿಗಳು ಅಸಹಾಯಕತೆ ತೋಡಿಕೊಳ್ಳುತ್ತಿದ್ದಾರೆ. ಯೋಜನೆ ಬಳಿಕ ಪರಸ್ಥಿತಿ ಹೀಗಿದೆ.