ಚಿಕ್ಕಮಗಳೂರು, ಜೂ 23 (DaijiworldNews/HR): ಚಿಕ್ಕಮಗಳೂರು ತಾಲೂಕಿನ ಆಣೂರು ಸಮೀಪದ ಕೆಸರಿಕೆ ಗ್ರಾಮದಲ್ಲಿ ನಿಧಿ ಹುಡುಕಲೆಂದು ತಂಡವೊಂದು ನಿರ್ಜನ ಪ್ರದೇಶದಲ್ಲಿ ಸುಮಾರು10 ಅಡಿ ಅಗಲ, 15 ಅಡಿ ಆಳ ಗುಂಡಿ ತೋಡಿದ ಘಟನೆ ನಡೆದಿದೆ.
ನಿಧಿ ಶೋಧದ ತಂಡವು ಉಡುಪಿ ನೋಂದಣಿ ಸಂಖ್ಯೆ ಇರುವ ಎರಡು ಕಾರಿನಲ್ಲಿ ಬಂದಿದ್ದು, ಕೆಸರಿಕೆ ಗ್ರಾಮದಲ್ಲಿ ಪೂಜೆ ನಡೆಸಿದೆ ಎನ್ನಲಾಗಿದೆ.
ಇನ್ನು ನಿಧಿಗಾಗಿ ಶೋಧ ನಡೆಸಿದ ಸ್ಥಳದಲ್ಲಿ ಅರಿಶಿಣ-ಕುಂಕುಮ, ಕುಂಬಳಕಾಯಿ, ಕೋಳಿ, ಕಾಯಿ, ಸೇರಿ ವಿವಿಧ ವಸ್ತುಗಳು ಪತ್ತೆಯಾಗಿದೆ.
ಗ್ರಾಮದ ನಿರ್ಜನ ಪ್ರದೇಶದಲ್ಲಿ 15 ಅಡಿಯಷ್ಟು ಆಳದ ಗುಂಡಿ ತೋಡಿ ನಿಧಿಗಾಗಿ ಶೋಧ ನಡೆಸಿದ್ದು, ನಿರ್ಜನ ಪ್ರದೇಶದಲ್ಲಿ ಬೆಳಕು ಕಂಡು ಗ್ರಾಮಸ್ಥರು ಸ್ಥಳಕ್ಕೆ ತೆರಳಿದಾಗ ತಂಡ ಅಲ್ಲಿಂದ ಸ್ಕೇಪ್ ಆಗಿದೆ.