ಬಳ್ಳಾರಿ, ಜೂ 24 (DaijiworldNews/MS): ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಳಿನ್ ಕುಮಾರ್ ಕಟೀಲ್ ರಾಜೀನಾಮೆ ಘೋಷಣೆ ಮಾಡಿದ್ದಾರೆ.
ವಿಧಾನಸಭೆ ಚುನಾವಣೆ ಸೋಲಿನ ಬಳಿಕ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸಲ್ಲಿಸಿದ್ದೇನೆ ಎಂದು ನಳಿನ್ ಕುಮಾರ್ ಹೇಳಿದ್ದಾರೆ. ಶನಿವಾರ ಬಳ್ಳಾರಿಯಲ್ಲಿ ಮಾತನಾಡಿದ ಅವರು, ಚುನಾವಣೆ ಸೋಲಿನ ಬಳಿಕ ನೈತಿಕ ಹೊಣೆ ಹೊತ್ತು ರಾಜೀನಾಮೆ ಸಲ್ಲಿಕೆ ಮಾಡಿದ್ದೇನೆ ಎಂದು ಹೇಳಿದ್ದಾರೆ.
ಇನ್ನೂ, ಚುನಾವಣೆಯಲ್ಲಿ ಯಾವುದೇ ಒಳ ಒಪ್ಪಂದ ಆಗಿಲ್ಲ ಎಂದಿರುವ ಅವರು, ಹೊಂದಾಣಿಕೆ ಮಾಡಿಕೊಂಡಿದ್ದರೆ ಕನಕಪುರದಲ್ಲಿ ಡಿಕೆಶಿ ವಿರುದ್ಧ ಅಶೋಕ್ ಹಾಗೂ ವರುಣದಲ್ಲಿ ಸಿದ್ದರಾಮಯ್ಯ ವಿರುದ್ಧ ಸೋಮಣ್ಣ ಸ್ಪರ್ಧಿಸುತ್ತಿರಲಿಲ್ಲ ಎಂದು ಹೇಳಿದ್ದಾರೆ.