ಬೆಂಗಳೂರು, ಜೂ 25 (DaijiworldNews/HR): ವಾಸ್ತುದೋಷದ ಕಾರಣಕ್ಕಾಗಿ ಕಳೆದ ಐದು ವರ್ಷಗಳಿಂದ ಮುಚ್ಚಲಾಗಿದ್ದ ವಿಧಾನಸೌಧದ ಮುಖ್ಯಮಂತ್ರಿಗಳ ಕಚೇರಿಯ ದಕ್ಷಿಣ ದ್ವಾರವನ್ನು ತೆರೆಸಿ, ಅದೇ ಬಾಗಿಲಿನಿಂದ ಕಚೇರಿ ಪ್ರವೇಶ ಮಾಡಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಜನರ ಬಗ್ಗೆ ಕಾಳಜಿ, ನಡತೆಯಲ್ಲಿ ಪ್ರಾಮಾಣಿಕತೆ, ಕರ್ತವ್ಯದಲ್ಲಿ ನಿಷ್ಠೆ ನಮ್ಮೊಳಗಿದ್ದರೆ ದಿಕ್ಕು, ಘಳಿಗೆ, ಮುಹೂರ್ತ ಎಲ್ಲವೂ ನಗಣ್ಯ. ವಾಸ್ತುದೋಷದ ಕಾರಣಕ್ಕಾಗಿ ಕಳೆದ ಐದು ವರ್ಷಗಳಿಂದ ಮುಚ್ಚಲಾಗಿದ್ದ ವಿಧಾನಸೌಧದ ಮುಖ್ಯಮಂತ್ರಿಗಳ ಕಚೇರಿಯ ದಕ್ಷಿಣ ದ್ವಾರವನ್ನು ತೆರೆಸಿ, ಅದೇ ಬಾಗಿಲಿನಿಂದ ಕಚೇರಿ ಪ್ರವೇಶ ಮಾಡಿದೆ ಎಂದಿದ್ದಾರೆ.
ಇನ್ನು ಕೊಠಡಿಯೊಳಗೆ ಒಳ್ಳೆಯ ಗಾಳಿ, ಬೆಳಕು ಬರುವಂತಿದ್ದರೆ ಅದಕ್ಕಿಂತ ಉತ್ತಮ ವಾಸ್ತು ಬೇರಿಲ್ಲ. ನಡೆ - ನುಡಿ ಶುದ್ಧವಿದ್ದರೆ ಮತ್ತೆಲ್ಲವೂ ಶುಭದಾಯಕವಾಗಿರಲಿದೆ. ಜನತೆಯ ಆಶೀರ್ವಾದ ಇರಲಿ ಎಂದು ಹೇಳಿದ್ದಾರೆ.