ಹಾಸನ, ಜೂ 27 (DaijiworldNews/HR): ಹಣ ಕೊಡ್ತೀವಿ ಅಂದ್ರೂ ಕೇಂದ್ರ ಸರ್ಕಾರ ಅಕ್ಕಿ ಪೂರೈಸುತ್ತಿಲ್ಲ ಎಂದು ಕೇಂದ್ರ ಸರ್ಕಾರದ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಕೇಂದ್ರ ಸರ್ಕಾರವೇನು ಪುಕ್ಕಟೆಯಾಗಿ ರಾಜ್ಯಕ್ಕೆ ಅಕ್ಕಿ ಪೂರೈಸಲ್ಲ. ಬಡವರ ಮೇಲೂ ಗದಾಪ್ರಹಾರ ಮಾಡಲು ಹೊರಟಿದ್ದಾರೆ ಎಂದರು.
ಇನ್ನು ನಾವು ಈಗ ಬೇರೆ ಕಡೆಯಿಂದ ಅಕ್ಕಿ ಖರೀದಿಸಲು ಪ್ರಯತ್ನ ಮಾಡ್ತಿದ್ದೇವೆ. ಈ ಕುರಿತು ನಾಳೆ ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಮಾಡುತ್ತೇವೆ ಎಂದಿದ್ದಾರೆ.
ಬಿಜೆಪಿ ಸರ್ಕಾರದ ಹಗರಣಗಳ ಬಗ್ಗೆ ತನಿಖೆ ವಿಚಾರವಾಗಿ ಮಾತನಾಡಿದ ಸಿಎಂ, ಕೊರೊನಾ ವೇಳೆ ಮೆಡಿಕಲ್ ವಸ್ತುಗಳ ಖರೀದಿಯಲ್ಲಿ ಅವ್ಯವಹಾರ, 40% ಕಮಿಷನ್ ಆರೋಪ ಸೇರಿ ಎಲ್ಲದರ ಬಗ್ಗೆಯೂ ತನಿಖೆ ಆಗುತ್ತೆ ಎಂದು ತಿಳಿಸಿದ್ದಾರೆ.