ಬೆಂಗಳೂರು, ಜೂ 28 (DaijiworldNews/MS): ಭಾರತ್ ಜೋಡೋ ಯಾತ್ರೆಯಲ್ಲಿ ಕೆಜಿಎಫ್ ಚಿತ್ರದ ಮ್ಯೂಸಿಕ್ ಬಳಸಿದ ಆರೋಪಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ಪ್ರಕರಣ ರದ್ದು ಕೋರಿ ಸಲ್ಲಿಸಿದ ಅರ್ಜಿಯನ್ನು ಹೈಕೋರ್ಟ್ ವಜಾ ಮಾಡಿದೆ. ಹೀಗಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಸಂಕಷ್ಟ ಎದುರಾಗಿದೆ.
ಈ ಸಂಬಂಧ ಪ್ರಕರಣ ರದ್ದು ಕೋರಿ ಸಲ್ಲಿಸಲಾಗಿದ್ದಂತ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರನ್ನ ಒಳಗೊಂಡ ಏಕಸದಸ್ಯ ನ್ಯಾಯಪೀಠವು ವಿಚಾರಣೆ ನಡೆಸಿದ್ದು ರದ್ದುಗೊಳಿಸಲು ಹೈಕೋರ್ಟ್ ನಕಾರ ವ್ಯಕ್ತಪಡಿಸಿದೆ.
ಸೂಕ್ತ ಅನುಮತಿ ಪಡೆಯದೆಯೇ ಕೆಜಿಎಫ್ ಮ್ಯೂಸಿಕ್ ಬಳಸಲಾಗಿದೆ ಎಂದು ಆರೋಪಿಸಿ ರಾಹುಲ್ ಗಾಂಧಿ ಮತ್ತು ಇತರರ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು.