ಬೆಂಗಳೂರು, ಜೂ 30 (DaijiworldNews/HR): ಕೇಂದ್ರ ಸರ್ಕಾರದ ನಿರ್ಬಂಧ ಪ್ರಶ್ನಿಸಿ ಟ್ವಿಟರ್ ಸಂಸ್ಥೆ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿ 50 ಲಕ್ಷ ರೂ. ದಂಡ ವಿಧಿಸಿ ಆದೇಶ ಹೊರಡಿಸಿದೆ.
ದಂಡದ ಮೊತ್ತವನ್ನು45 ದಿನಗಳಲ್ಲಿ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ಪಾವತಿಸಬೇಕು. ತಡವಾದರೆ ಪ್ರತಿದಿನ 5 ಸಾವಿರ ದಂಡ ವಿಧಿಸಬೇಕಾಗುತ್ತದೆ ಎಂದು ಹೈಕೋರ್ಟ್ ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಅವರು ಎಚ್ಚರಿಕೆ ನೀಡಿದ್ದಾರೆ.
ಇನ್ನು ಆಕ್ಷೇಪಾರ್ಹ ಪೋಸ್ಟ್ ತೆಗೆಯಲು ಕೇಂದ್ರ ಸರ್ಕಾರದ ನೀಡಿದ್ದ ಸೂಚನೆಯನ್ನು ಪ್ರಶ್ನಿಸಿ ಟ್ವಿಟ್ಟರ್ ಸಂಸ್ಥೆ ಹೈಕೋರ್ಟ್ ಮೆಟ್ಟಿಲೇರಿತ್ತು.
ಈ ಅರ್ಜಿ ಹೈಕೋರ್ಟ್ ವಜಾ ಮಾಡಿದ್ದು, ಕೇಂದ್ರ ಸರ್ಕಾರದ ನೋಟಿಸ್ನ್ನು ಟ್ವಿಟರ್ ಸಂಸ್ಥೆ ಪಾಲಿಸಿಲ್ಲ1 ವರ್ಷ ವಿಳಂಬದ ನಂತರ ಸೂಚನೆ ಪಾಲಿಸಿ ಕೋರ್ಟ್ಗೆ ಬಂದಿದ್ದೀರಿ ಎಂದು ಟ್ವಿಟರ್ ಸಂಸ್ಥೆಗೆ ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ತಿಳಿಸಿದ್ದಾರೆ.