ಬೆಂಗಳೂರು, ಜು 02 (DaijiworldNews/AK) ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಹೊಸದಾಗಿ ವೈಎಸ್ಟಿ ಟ್ಯಾಕ್ಸ್ ಜಾರಿಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಆರೋಪಿಸಿದ್ದಾರೆ.
ಜೆಪಿ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೇಸ್ ಸರ್ಕಾರದಲ್ಲಿ ಹೊಸ ವೈಎಸ್ಟಿ ಟ್ಯಾಕ್ಸ್ ಶುರುವಾಗಿದೆ ಎಂದು ಹೇಳಿದರು. ದೇಶದಲ್ಲಿ ಜಿಎಸ್ಟಿ ಟ್ಯಾಕ್ಸ್ ಇರುವ ಹಾಗೆ ಈ ಸರ್ಕಾರದಲ್ಲಿ ವೈ ಎಸ್ಟಿ ಟ್ಯಕ್ಸ್ ನಡೆಯುತ್ತಿದೆ ಎಂದರು.
ಇದೇ ವೇಳೆ ವರ್ಗಾವಣೆ ದಂಧೆ ಬಗ್ಗೆ, ತಮ್ಮ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿರುವ ಹೇಳಿಕೆ ಬಗ್ಗೆ ಕಿಡಿಕಾರದ ಅವರು,ನಾನು ನಿಮ್ಮ ಪಕ್ಷದ ಜತೆ ಸರಕಾರ ರಚನೆ ಮಾಡಿದ್ದಾಗ ನೀವೇಲ್ಲ ಏನೇನು ಮಾಡಿರುವುದು ಗೊತ್ತಿರುವ ವಿಚಾರ, ನಾನು ಸಿಎಂ ಆಗಿದ್ದಾಗ 5 ರೂ. ಕೂಡ ತೆಗೆದುಕೊಳ್ಳದೆ ವರ್ಗಾವಣೆ ಮಾಡಿದ್ದೇನೆ ಎಂದು ಸರಕಾರದ ನಡೆ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು. ನನಗೆ ಸಮ್ಮಿಶ್ರ ಸರ್ಕಾರದಲ್ಲಿ ವರ್ಗಾವಣೆ ಮಾಡೋ ಅಧಿಕಾರವೇ ಇರಲಿಲ್ಲ ಎಂದು ಹೇಳಿದರು.
ನಾನು ಯಾವೋಬ್ಬ ಅಧಿಕಾರಿಯನ್ನು ವರ್ಗಾವಣೆ ಮಾಡುವಂತೆಯೇ ಇರಲಿಲ್ಲ. ಎಲ್ಲ ದಂಧೆಗಳು ಯಾರ ಮೂಗಿನಡಿ ನಡೆಯುತ್ತಿದ್ದವು ಎಲ್ಲರಿಗೂ ಗೊತ್ತಿದೆ ಎಂದು ಆಕ್ರೋಶ ಹೊರಹಾಕಿದರು.
ಲಂಚ ನೀಡಿ ಹುದ್ದೆ ಪಡೆಯಲು ಬಂದವರನ್ನು ನಾನು ದೂರ ಇಟ್ಟಿದ್ದೆ. ಯಲಹಂಕ ತಹಶಿಲ್ದಾರ್ ಹುದ್ದೆಗೆ ಒಂದೂವರೆ ಕೋಟಿ ಕೊಡ್ತೀವಿ ಅಂದವರನ್ನು ಆಚೆ ಇಟ್ಟಿದ್ದೆ. ಈಗ ನೋಡಿದರೆ ವೈಎಸ್ ಟಿ ಟ್ಯಾಕ್ಸ್ ಅಂತ ಸರರ್ಕಾರ ಶುರು ಮಾಡಿಕೊಂಡಿದ್ದಾರೆ ಎಂದು ಕಟುವಾಗಿ ಟೀಕಿಸಿದರು.