ನವದೆಹಲಿ, ಜು 3 (DaijiworldNews/MS): ದೆಹಲಿ ಅಬಕಾರಿ ನೀತಿಗೆ ಸಂಬಂಧಿಸಿದ ಜಾರಿ ನಿರ್ದೇಶನಾಲಯದ ಪ್ರಕರಣದಲ್ಲಿ ಆಮ್ ಆದ್ಮಿ ಪಕ್ಷದ ನಾಯಕ ಮತ್ತು ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನ ದೆಹಲಿ ಹೈಕೋರ್ಟ್ ಸೋಮವಾರ ತಿರಸ್ಕರಿಸಿದೆ.
ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಆಮ್ ಆದ್ಮಿ ಪಕ್ಷದ ಮಾಜಿ ಸಂವಹನ ಉಸ್ತುವಾರಿ ವಿಜಯ್ ನಾಯರ್, ಅಭಿಷೇಕ್ ಬೋಯಿನಪಲ್ಲಿ (ಹೈದರಾಬಾದ್ ಮೂಲದ ಉದ್ಯಮಿ) ಮತ್ತು ಬಿನೋಯ್ ಬಾಬು ಬಿನೋಯ್ (ಮದ್ಯ ಕಂಪನಿ ಪೆರ್ನೋಡ್ ರಿಕಾರ್ಡ್ ಮ್ಯಾನೇಜರ್) ಜಾಮೀನು ಅರ್ಜಿಗಳನ್ನು ನ್ಯಾಯಾಲಯ ವಜಾಗೊಳಿಸಿದೆ .
ಆರೋಪಿಗಳು ಹೊಂದಿರುವ ರಾಜಕೀಯ ಸ್ಥಾನಮಾನದಿಂದಾಗಿ ಸಾಕ್ಷ್ಯಗಳನ್ನ ತಿರುಚುವ ಮತ್ತು ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆಯನ್ನು ತಳ್ಳಿಹಾಕಲಾಗುವುದಿಲ್ಲ ಎಂದು ನ್ಯಾಯಾಲಯ ತನ್ನ ಆದೇಶದಲ್ಲಿ ತಿಳಿಸಿದೆ.