ಬೆಂಗಳೂರು, ಜು 5 (DaijiworldNews/MS): ಸ್ಪೀಕರ್ ಯುಟಿ ಖಾದರ್, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ 15 ಮಂದಿ ಸಚಿವರು ಹಾಗೂ 134 ವಿಧಾನಸಭೆ ಶಾಸಕರು ಹಾಗೂ 48 ಮಂದಿ ಪರಿಷತ್ ಸದಸ್ಯರು ಇನ್ನು ಕೂಡ ಲೋಕಾಯುಕ್ತಕ್ಕೆ ತಮ್ಮ ಆಸ್ತಿ ವಿವರಗಳನ್ನು ಸಲ್ಲಿಕೆ ಮಾಡಿಲ್ಲ.
ಕರ್ನಾಟಕ ಲೋಕಾಯುಕ್ತ ಕಾಯ್ದೆ ಪ್ರಕಾರ ವಿಧಾನಸಭೆ ಮತ್ತು ಪರಿಷತ್ ಸದಸ್ಯರು ಜೂ.30ರೊಳಗೆ ಆಸ್ತಿ ವಿವರಗಳನ್ನು ಸಲ್ಲಿಕೆ ಮಾಡುವುದು ಕಡ್ಡಾಯವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಕೇವಲ 90 ಸದಸ್ಯರಷ್ಟೇ ಆಸ್ತಿ ವಿವರ ಸಲ್ಲಿಸಿದ್ದಾರೆ.
ಆರ್ಟಿಐ ಕಾರ್ಯಕರ್ತ ಎಚ್ಎಂ ವೆಂಕಟೇಶ್ ಈ ಮಾಹಿತಿಯನ್ನು ಬಹಿರಂಗಪಡಿಸಿದ್ದಾರೆ. ಇನ್ನು ಆ.೩೦ರವರೆಗೆ ಆಸ್ತಿ ವಿವರಗಳನ್ನು ಸಲ್ಲಿಸುವುದಕ್ಕೆ ಹೆಚ್ಚುವರಿ ಕಾಲಾವಕಾಶ ಕೂಡ ಇರುತ್ತದೆ.