ಬೆಂಗಳೂರು,ಜು 5 (DaijiworldNews/MS): ಇಂದು ಸಂಜೆ ಅಥವಾ ನಾಳೆಯೊಳಗೆ ವಿರೋಧ ಪಕ್ಷದ ನಾಯಕ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಗಳಿಗೆ ಆಯ್ಕೆ ನಡೆಯಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಬುಧವಾರ ಹೇಳಿದ್ದಾರೆ.
ಮಾಧ್ಯಮದೊಂದಿಗೆ ಮಾತನಾಡಿದ ಅವರು, ಕೇಂದ್ರದ ನಾಯಕರು ವ ಶಾಸಕರು ಮತ್ತು ನಾಯಕರ ಅಭಿಪ್ರಾಯವನ್ನು ತೆಗೆದುಕೊಂಡಿದ್ದಾರೆ. ಈ ಸಂಬಂಧ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರೊಂದಿಗೆ ಮಾತುಕತೆ ನಡೆಸುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.
ಬಿಜೆಪಿ ಸರ್ಕಾರದ ಅವಧಿಯಲ್ಲಿ ಭ್ರಷ್ಟಾಚಾರ ನಡೆದಿರುವುದಾಗಿ ಕಾಂಗ್ರೆಸ್ ಆರೋಪಿಸಿದ್ದು , ಈ ವಿಚಾರವನ್ನು ನ್ಯಾಯಾಂಗ ತನಿಖೆಗೂ ಒಪ್ಪಿಸುವುದಾಗಿ ಹೇಳುತ್ತಿದ್ದಾರೆ, ಇದಕ್ಕೆ ನನ್ನ ಸ್ವಾಗತವಿದೆ ಎಂದು ಹೇಳಿದ್ದಾರೆ.