ಬೆಂಗಳೂರು, ಜು 7 (DaijiworldNews/MS): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ 14 ನೇ ಬಜೆಟ್ ಮಂಡನೆ ಆರಂಭಿಸಿದ್ದಾರೆ. ಸ್ಪೀಕರ್ ಯು.ಟಿ ಖಾದರ್ ಅನುಮೋದನೆ ನೀಡಿದ ಬಳಿಕ ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು ನನ್ನ ಬಜೆಟ್ ಆಗಿದೆ ಎಂದು ಸಿಎಂ ಹೇಳಿದ್ದಾರೆ.
ನಾನು ಮಂಡಿಸುತ್ತಿರುವ 14ನೇ ಬಜೆಟ್ ಆಗಿದೆ. 3 ಲಕ್ಷ 27 ಸಾವಿರ ಕೋಟಿ ರೂಪಾಯಿ ಗಾತ್ರದ ಬಜೆಟ್ ಮಂಡನೆಯಾಗಿದ್ದು ಗ್ಯಾರಂಟಿ ಯೋಜನೆಗಳಿಗೆ ಪ್ರತಿಪಕ್ಷಗಳು ಬಿಟ್ಟಿ ಕೊಡುಗೆ ಎಂದು ಜನರನ್ನು ದಿಕ್ಕುತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದರು.
ಗ್ಯಾರಂಟಿ ಒಂದು ಮಾತು ಹೇಳಲು ಯೋಜನೆಗಳನ್ನು ಕೇವಲ ಬಿಟ್ಟಿ ಕೊಡುಗೆಗಳೆಂದು ಆಡಿಕೊಳ್ಳುವವರು ಒಮ್ಮೆ ನಮ್ಮ ಬಡವರ, ಶ್ರಮಿಕರ ಬದುಕನ್ನು ಗಮನಿಸಬೇಕಾಗಿದೆ. ತಾವು ವಿರೋಧ ಪಕ್ಷದ ಜವಾಬ್ದಾರಿಯನ್ನು ನಿರ್ವಹಿಸಿ; ಆದರೆ ಶ್ರೀಸಾಮಾನ್ಯರ ವಿವೇಚನೆಗೆ ಅಪಮಾನ ಮಾಡಬೇಡಿ ಎಂದು ವಿನಂತಿ ಮಾಡಿಕೊಳ್ಳುತ್ತೇನೆ. ಜನರು ಬುದ್ಧಿವಂತರು; ಜನರು ಪ್ರಜ್ಞಾವಂತರು. ಇಂತಹ ತರ್ಕ ರಹಿತ ಆಲೋಚನೆಗಳನ್ನು ನಂಬುವುದಿಲ್ಲ. ವಾಸ್ತವವೆಂದರೆ, ಜನ ನಿಮ್ಮಿಂದ ಬೇಸತ್ತು ಇಷ್ಟೊಂದು ಭಾರಿ ಬಹುಮತದಿಂದ ನಮ್ಮನ್ನು ಆರಿಸಿ ವಿಧಾನ ಸೌಧಕ್ಕೆ ಕಳುಹಿಸಿದ್ದಾರೆ.