ಮೀನುಗಾರಿಕೆ, ಜು 07 (DaijiworldNews/HR): ಆರ್ಥಿಕ ಸಚಿವರಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇಂದು ಮಂಡಿಸಿದ ರಾಜ್ಯ ಬಜೆಟ್ನಲ್ಲಿ ಮೀನುಗಾರ ಮಹಿಳೆಯರಿಗೆ ಬಂಪರ್ ಕೊಡುಗೆ ನೀಡಲಾಗಿದೆ.
ಮೀನುಗಾರ ಮಹಿಳೆಯರ ಬ್ಯಾಂಕುಗಳಲ್ಲಿ ಬಡ್ಡಿರಹಿತವಾಗಿ ನೀಡುವ ಸಾಲದ ಮಿತಿಯನ್ನು 50,000 ರೂ. ಗಳಿಂದ ಮೂರು ಲಕ್ಷ ರೂ. ಗಳಿಗೆ ಹೆಚ್ಚಿಸಲಾಗಿದೆ.
ಮೀನುಗಾರರ ದೋಣಿಗಳಿಗೆ ರಿಯಾಯಿತಿ ದರದಲ್ಲಿ ನೀಡುತ್ತಿರುವ ಡೀಸೆಲ್ ಮಿತಿಯನ್ನು ಒಂದೂವರೆ ಲಕ್ಷ ಕಿಲೋ ಲೀಟರ್ನಿಂದ ಎರಡು ಲಕ್ಷ ಕಿಲೋ ಲೀಟರ್ಗಳವರೆಗೆ ಹೆಚ್ಚಿಸಲಾಗಿದ್ದು, ಇದರಿಂದ ಮೀನುಗಾರರಿಗೆ ಸರ್ಕಾರದಿಂದ 250 ಕೋಟಿ ರೂ.ಗಳಷ್ಟು ನೆರವಾಗಲಿದೆ.
ಮೀನುಗಾರಿಕಾ ದೋಣಿಗಳಲ್ಲಿನ ಸೀಮೆ ಎಣ್ಣೆ ಇಂಜಿನ್ಗಳನ್ನು ಪೆಟ್ರೋಲ್/ಡೀಸೆಲ್ ಇಂಜಿನ್ಗಳಾಗಿ ಬದಲಾಯಿಸಲು ತಲಾ 50,000 ರೂ. ಸಹಾಯಧನ ನೀಡಲಾಗುವುದು.