ಹಾಸನ, ಜು 09 (DaijiworldNews/HR): ಚೆಕ್ ಬೌನ್ಸ್ ಪ್ರಕರಣದಲ್ಲಿ ನಟ ನೀನಾಸಂ ಅಶ್ವಥ್ ಅವರನ್ನು ಹಾಸನ ಪೊಲೀಸರು ಬಂಧಿಸಿದ್ದಾರೆ.
ನೀನಾಸಂ ಅಶ್ವಥ್ ಅವರು ನ್ಯಾಯಾಲಯದ ಮುಂದೆ ಹಾಜರುಪಡಿಸಿದಾಗ ನ್ಯಾಯಾಧೀಶರ ಬಳಿ ತಪ್ಪೊಪ್ಪಿಕೊಂಡು 25% ರಷ್ಟು ಹಣ ಪಾವತಿಸಿದ ಬಳಿಕ ನಟನನ್ನು ಬಿಡುಗಡೆ ಮಾಡಲಾಗಿದೆ.
ಇನ್ನು ಹಾಸನ ಮೂಲದ ರೋಹಿತ್ ಎಂಬವರಿಂದ ನಟ ಅಶ್ವಥ್ ಹಸುಗಳನ್ನ ಖರೀದಿ ಮಾಡಿ 1.5 ಲಕ್ಷದ ಚೆಕ್ ನೀಡಿದ್ದರು. ರೋಹಿತ್ ಬ್ಯಾಂಕ್ಗೆ ಚೆಕ್ ಹಾಕಿದಾಗ ಬೌನ್ಸ್ ಆಗಿತ್ತು.
ಈ ಸಂಬಂಧ ರೋಹಿತ್ ಹಾಸನದ ಜೆಎಂಎಫ್ಸಿ ಕೋರ್ಟ್ನಲ್ಲಿ ಕೇಸ್ ಹಾಕಿದ್ದು, ಕೋರ್ಟ್ ನಾಲ್ಕು ಬಾರಿ ಅರೆಸ್ಟ್ ವಾರೆಂಟ್ ಹೊರಡಿಸಿತ್ತು. ಆದರೆ ನಾಲ್ಕೂ ಬಾರಿಯೂ ನಟ ಅಶ್ವಥ್ ಕೋರ್ಟ್ಗೆ ಹಾಜರಾಗಿರಲಿಲ್ಲ.
ಇನ್ನು ಐದನೇ ಬಾರಿಗೆ ಅರೆಸ್ಟ್ ವಾರೆಂಟ್ ಜಾರಿ ಮಾಡಿದ ಹಿನ್ನೆಲೆಯಲ್ಲಿ ಹಾಸನ ಬಡಾವಣೆ ಠಾಣೆ ಪೊಲೀಸರು ಶನಿವಾರ ರಾತ್ರಿ ಅಶ್ವಥ್ ಅವರನ್ನು ಬಂಧಿಸಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದಾರೆ.