ಬೆಂಗಳೂರು, ಜು 11 (DaijiworldNews/HR): ಸಾರ್ವಜನಿಕರ ಕುಂದು ಕೊರತೆಗಳನ್ನು ನೇರವಾಗಿ ಮುಖ್ಯಮಂತ್ರಿಗಳ ಕಚೇರಿಯ ಅಧಿಕಾರಿಗಳು ಮತ್ತು ಸಿಬ್ಬಂದಿಯ ಗಮನಕ್ಕೆ ತರಲು ಹೊಸ ಟ್ವಿಟರ್ ಖಾತೆಯನ್ನು ತೆರೆಯಲಾಗಿದೆ ಎಂದು ವರದಿ ತಿಳಿಸಿದೆ.
ಈ ಕುರಿತಾಗಿ ಮುಖ್ಯಮಂತ್ರಿ ಕಚೇರಿ ಮಾಧ್ಯಮ ಪ್ರಕಟನೆ ಹೊರಡಿಸಿದ್ದು, https://twitter.com/osd_cmkarnataka ಹೆಸರಿನ ಟ್ವಿಟರ್ ಖಾತೆಗೆ ಸಾರ್ವಜನಿಕ ಕುಂದು ಕೊರತೆಗಳ ಕುರಿತಾದ ಸಮಸ್ಯೆಗಳನ್ನು ಟ್ಯಾಗ್ ಮಾಡಬಹುದು ಎಂದು ತಿಳಿಸಿದೆ.
ಇನ್ನುಸಾರ್ವಜನಿಕ ಕುಂದುಕೊರತೆಗಳನ್ನು ಮಾತ್ರ ಮುಖ್ಯಮಂತ್ರಿಗಳ ಕಚೇರಿಯ ಈ ಖಾತೆಗೆ ಟ್ಯಾಗ್ ಮಾಡಬಹುದಾಗಿದ್ದು ವೈಯುಕ್ತಿಕ ಸಮಸ್ಯೆಗಳನ್ನು ಈ ಖಾತೆಗೆ ಟ್ಯಾಗ್ ಮಾಡದೆ ಅವುಗಳನ್ನು ನೇರವಾಗಿ ಸಂಬಂಧಪಟ್ಟವರ ಗಮನಕ್ಕೆ ತರಬಹುದಾಗಿದೆ ಎಂದು ತಿಳಿಸಲಾಗಿದೆ.