ಚೆನ್ನೈ, ಜು 14 (DaijiworldNews/HR): ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿನ ಮೇಲೆ ಕಲ್ಲು ತೂರಾಟ ಪ್ರಕರನಗಳು ನಡೆಯುತ್ತಲೇ ಇದ್ದು, ಇದೀಗ ಇಂದು ಚೆನ್ನೈ ಸೆಂಟ್ರಲ್ ರೈಲು ನಿಲ್ದಾಣದ ಪಕ್ಕದಲ್ಲಿರುವ ಬೇಸಿನ್ ಬ್ರಿಡ್ಜ್ ನಿಲ್ದಾಣದ ಬಳಿ ನಡೆದಿದೆ.
ಮೈಸೂರು-ಚೆನ್ನೈ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿಗೆ ಕಲ್ಲು ತೂರಾಟ ನಡೆಸಿದ್ದರಿಂದ ರೈಲಿನ ಎರಡು ಕಿಟಕಿಗಳಿಗೆ ಹಾನಿಯಾಗಿದ್ದು, ಎಕ್ಸ್ಪ್ರೆಸ್ ರೈಲು ಮೈಸೂರಿನಿಂದ ಚೆನ್ನೈಗೆ ಬರುತ್ತಿದ್ದಾಗ ಈ ಘಟನೆ ಸಂಭವಿಸಿದೆ.
ಇನ್ನು ಈ ವರ್ಷದ ಫೆಬ್ರವರಿಯಲ್ಲಿ ಬೆಂಗಳೂರಿನ ಕಂಟೋನ್ಮೆಂಟ್ ಸ್ಟೇಷನ್ ಬಳಿ ವಂದೇ ಭಾರತ್ ರೈಲಿನ ಮೇಲೆ ದುಷ್ಕರ್ಮಿಗಳು ಇದೇ ರೀತಿಯ ಕಲ್ಲು ತೂರಾಟ ನಡೆಸಿದ್ದರು