ನವದೆಹಲಿ, ಜು 15 (DaijiworldNews/MS): ಎರಡು ದಿನಗಳ ಫ್ರಾನ್ಸ್ ಪ್ರವಾಸ ಮುಗಿಸಿ ಪ್ರಧಾನಿ ನರೇಂದ್ರ ಮೋದಿ ಶನಿವಾರ ಬೆಳಗ್ಗೆ ಅಬುಧಾಬಿಗೆ ಆಗಮಿಸಿದರು.
ಅಬುಧಾಬಿಗೆ ಬಂದಿಳಿದ ಪ್ರಧಾನಿ ಮೋದಿ ಯುಎಇ ಅಧ್ಯಕ್ಷ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಹೃತ್ಪೂರ್ವಕವಾಗಿ ಸ್ವಾಗತಿಸಿದರು.
" ಅಬುಧಾಬಿಗೆ ಬಂದಿಳಿದಿದ್ದೇನೆ. ಯುಎಇ ಅಧ್ಯಕ್ಷ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರೊಂದಿಗೆ ಸಮಾಲೋಚನೆಗಾಗಿ ಎದುರುನೋಡುತ್ತಿದ್ದೇನೆ. ಈ ಭೇಟಿ ಭಾರತ- ಯುಎಇ ಸಹಕಾರವನ್ನು ಇನ್ನಷ್ಟು ಆಳಗೊಳಿಸುತ್ತದೆ" ಎಂದು ಪ್ರಧಾನಿ ಟ್ವೀಟ್ ಮಾಡಿದ್ದಾರೆ.
ಈ ಸಭೆಯಲ್ಲಿ ಇಂಧನ, ಆಹಾರ ಭದ್ರತೆ ಮತ್ತು ರಕ್ಷಣೆಯ ಪ್ರಮುಖ ಕ್ಷೇತ್ರಗಳಲ್ಲಿ ದ್ವಿಪಕ್ಷೀಯ ಸಂಬಂಧಗಳನ್ನು ಬಲಪಡಿಸುವುದು ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಚರ್ಚೆ ನಡೆಯಲಿದೆ.