ತೀರ್ಥಹಳ್ಳಿ, ಜು 16 (DaijiworldNews/HR): ಆಗುಂಬೆ ಘಾಟಿಯ 7 ನೇ ತಿರುವಿನಲ್ಲಿ ಗುಜರಿ ಫ್ಯಾಕ್ಟರಿ ಮಾಲಿಕರೊಬ್ಬರು ಆಕಸ್ಮಿಕವಾಗಿ 30 ಅಡಿ ಪ್ರಪಾತಕ್ಕೆ ಬಿದ್ದ ಘಟನೆ ಭಾನುವಾರ ಸಂಜೆ ನೆಡೆದಿದೆ.
ಸ್ಕ್ರಾಪ್ ಗಾಡಿಯನ್ನು ಟ್ರ್ಯಾಕ್ಟರ್ ಟೋಯಿಂಗ್ ಮಾಡ್ತಿದ್ದ ವೇಳೆ ಗಾಡಿ ಬ್ರೇಕ್ ಫೇಲ್ ಆದ ಹಿನ್ನೆಲೆಯಲ್ಲಿ ರಸ್ತೆ ಬದಿಯಲ್ಲಿ ನಿಂತಿದ್ದ ಮಹಮ್ಮದ್ ಪಾಷಾ ಅವರಿಗೆ ಗುದ್ದಿದ ವೇಳೆ ಪ್ರಪಾತಕ್ಕೆ ಬಿದ್ದಿದ್ದಾರೆ.
ಇನ್ನು ಆಗುಂಬೆ ಘಾಟ್ ನಿಂದ 25 ರಿಂದ 30 ಅಡಿ ಕೆಳಗಡೆ ಬಿದ್ದ ಪಾಷಾಗೆ ಗಂಭೀರ ಗಾಯವಾಗಿದ್ದು ಮೇಲಿನಿಂದ ಬಿದ್ದ ರಭಸಕ್ಕೆ ಪಾಷಾ ಅವರ ಸೊಂಟ ಮತ್ತು ತಲೆಗೆ ಪೆಟ್ಟು ಬಿದ್ದಿದೆ. ಕೂಡಲೇ ಸ್ಥಳದಲ್ಲಿದ್ದಲಿದ್ದವರು ರಕ್ಷಣೆ ಮಾಡಿದ್ದಾರೆ.