ಬೆಂಗಳೂರು, ಜು 17 (DaijiworldNews/MS): ರಾಜ್ಯ ಬಿಜೆಪಿಯ ಉಪಾಧ್ಯಕ್ಷೆ ತೇಜಸ್ವಿನಿ ಅನಂತ್ ಕುಮಾರ್ ಬಿಜೆಪಿಯ ನಡೆಗಳಿಂದ ನೊಂದಿದ್ದು ಬಿಜೆಪಿ ಬಿಟ್ಟು ಬೇರೊಂದು ಪಕ್ಷಕ್ಕೆ ಸೇರ್ಪಡೆಯಾಗುವ ಸಾಧ್ಯತೆ ಇದೆ ಎಂಬ ಬಗ್ಗೆ ಊಹಾಪೋಹಾಗಳಿಗೆ ಈಗ ತೆರೆ ಬಿದ್ದಿದೆ.
ಈ ಬಗ್ಗೆ ಖುದ್ದು ಟ್ವೀಟ್ ಮಾಡಿರುವ ತೇಜಸ್ವಿನಿ ದಯವಿಟ್ಟು ಊಹಾಪೋಹಗಳಿಗೆ ಕಿವಿಗೊಡಬೇಡಿ. ನಾನು ಭಾರತೀಯ ಜನತಾ ಪಕ್ಷದ ಜೊತೆಗೆ ಧೃಡವಾಗಿ ಇದ್ದೇನೆ. ಇಂಗ್ಲಿಷಿನಲ್ಲಿ ಹೇಳಬಹುದಾದರೆ, I am wedded to the party and ideology – no compromise ” ಎಂದು ಟ್ವೀಟ್ ಮಾಡುವ ಮೂಲಕ ತಾವು ಯಾವುದೇ ಕಾರಣಕ್ಕೂ ಪಕ್ಷ ಬಿಡುವುದಿಲ್ಲ ಎನ್ನುವುದನ್ನು ಸ್ಪಷ್ಟಪಡಿಸಿದ್ದಾರೆ.
ಈ ಹಿಂದೆಯೂ ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷೆ ತೇಜಸ್ವಿನಿ ಅನಂತಕುಮಾರ್ ಮಾಡಿದ್ದ ಮಾತು ಬೆಳ್ಳಿ ಹೌದೋ ಅಲ್ಲವೋ ಗೊತ್ತಿಲ್ಲ, ಆದರೆ ಮೌನ ಮಾತ್ರ ಬಂಗಾರ. ಏನಂತಿರಿ?” ಎಂಬ ಟ್ವೀಟ್ ಭಾರೀ ಚರ್ಚೆಗೆ ಕಾರಣವಾಗಿತ್ತು.