ಬೆಂಗಳೂರು, ಜು 17 (DaijiworldNews/HR): ಶೀಘ್ರದಲ್ಲೇ ವಿಪಕ್ಷ ನಾಯಕರಾಗಲಿರುವ ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ಅವರಿಗೆ ಅಭಿನಂದನೆಗಳು. ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಕಾಂಗ್ರೆಸ್ ಸೇರುವ ಬಗ್ಗೆ ಯೋಚಿಸಬೇಕು ಎಂದು ಹೇಳುವ ಮೂಲಕ ಕೈಗಾರಿಕಾ ಸಚಿವ ಎಂಬಿ ಪಾಟೀಲ್ ಅವರು ಬೊಮ್ಮಾಯಿ ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಸೇರುವಂತೆ ಆಹ್ವಾನಿಸಿದ್ದಾರೆ.
ಚುನಾವಣೆ ಫಲಿತಾಂಶ ಬಂದು ಎರಡು ತಿಂಗಳು ಕಳೆದರೂ ವಿಪಕ್ಷ ನಾಯಕನ ಆಯ್ಕೆ ನಡೆಯದ ಹಿನ್ನಲೆಯಲ್ಲಿ ಟ್ವೀಟ್ ಮಾಡಿರುವ ಎಂಬಿ ಪಾಟೀಲ್, ಶೀಘ್ರದಲ್ಲೇ ವಿಪಕ್ಷ ನಾಯಕರಾಗಲಿರುವ ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ಅವರಿಗೆ ಅಭಿನಂದನೆಗಳು. ಅಂತಿಮವಾಗಿ ಬಿಜೆಪಿ ಬಸವರಾಜ ಬೊಮ್ಮಾಯಿಯವರನ್ನು ಮೂಲೆಗುಂಪು ಮಾಡಲು ನಿರ್ಧರಿಸಿದಂತಿದೆ. ಬೊಮ್ಮಾಯಿಯವರಿಗೂ ಸಹ ಬಿಎಸ್ ಯಡಿಯೂರಪ್ಪ, ಜಗದೀಶ್ ಶೆಟ್ಟರ್ ಅವರಿಗೆ ಬಂದಂತಹ ಪರಿಸ್ಥಿತಿಯೇ ಬರಲಿದೆ ಎಂದರು.
ಇನ್ನು ಬಿಜೆಪಿ ಎಂಬುದು ಕುಸಿಯುತ್ತಿರುವ ಕಾರ್ಡ್ಗಳ ಮನೆಯಾಗಿದೆ. ಬೊಮ್ಮಾಯಿಯವರು ಕಾಂಗ್ರೆಸ್ ಸೇರುವ ಬಗ್ಗೆ ಯೋಚಿಸಬೇಕು. ಅವರು ಈ ಹಿಂದಿನಂತೆ ಹಾಗೂ ಹಿರಿಯ ಬೊಮ್ಮಾಯಿಯವರಂತೆ (ಎಸ್ ಆರ್ ಬೊಮ್ಮಾಯಿ) ಜಾತ್ಯಾತೀತ ಸಿದ್ಧಾಂತಕ್ಕೆ ಮರಳಿದರೆ ಕಾಂಗ್ರೆಸ್ ಹೈಕಮಾಂಡ್ ಪರಿಗಣಿಸಬಹುದು ಎಂದು ಹೇಳಿದ್ದಾರೆ.