ಶ್ರೀನಗರ, ಜು 17 (DaijiworldNews/HR): ಭಯೋತ್ಪಾಕರೊಂದಿಗೆ ಜಮ್ಮು ಕಾಶ್ಮೀರದ ಎಲ್ ಜಿ ಆಡಳಿತವು ಸಂಪರ್ಕ ಹೊಂದಿರುವ ಕಾರಣದಿಂದ ಮೂವರು ಸರ್ಕಾರಿ ನೌಕರರನ್ನು ಕೆಲಸದಿಂದ ವಜಾಗೊಳಿಸಿರುವ ಘಟನೆ ನಡೆದಿದೆ.
ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆಗಳೊಂದಿಗೆ ಕೆಲಸ ಮಾಡಿದ ಆರೋಪದ ಮೇಲೆ ಕಾಶ್ಮೀರ ವಿಶ್ವವಿದ್ಯಾಲಯದ ಪಿಆರ್ಒ ಫಹೀಮ್ ಅಸ್ಲಾಂ, ಕಂದಾಯ ಇಲಾಖೆಯ ಅಧಿಕಾರಿ ಮುರಾವತ್ ಹುಸೇನ್ ಮತ್ತು ಪೊಲೀಸ್ ಕಾನ್ಸ್ಟೆಬಲ್ ಅರ್ಷಿದ್ ಅಹ್ಮದ್ ಅವರನ್ನು ಸೇವೆಯಿಂದ ವಜಾಗೊಳಿಸಿದೆ.
ಇನ್ನು ಈ ಮೂವರು ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆಗಳೊಂದಿಗೆ ಕೆಲಸ ಮಾಡುತ್ತಿದ್ದಾರೆ, ಭಯೋತ್ಪಾದಕರಿಗೆ ಲಾಜಿಸ್ಟಿಕ್ಸ್ ಒದಗಿಸುತ್ತಿದ್ದಾರೆ, ಭಯೋತ್ಪಾದಕ ಸಿದ್ಧಾಂತವನ್ನು ಪ್ರಚಾರ ಮಾಡುತ್ತಿದ್ದಾರೆ, ಭಯೋತ್ಪಾದಕರಿಗೆ ಹಣಕಾಸು ಸಂಗ್ರಹಿಸುತ್ತಿದ್ದಾರೆ ಎಂದು ಆರೋಪಿಸಲಾಗಿದೆ.