ನವದೆಹಲಿ, ಜು 21 (DaijiworldNews/AK): ಮೋದಿ ಉಪನಾಮ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಜೈಲುಶಿಕ್ಷೆ ತಡೆ ಕೋರಿದ್ದ ಅರ್ಜಿ ವಿಚಾರಣೆ ಇಂದು ಸುಪ್ರೀಂಕೋರ್ಟ್ನಲ್ಲಿ ನಡೆಯಲಿದೆ. ಈ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಭವಿಷ್ಯ ಇವತ್ತು ನಿರ್ಧಾರವಾಗಲಿದ್ದು ಎಲ್ಲರ ಗಮನ ಸುಪ್ರೀಂಕೋರ್ಟ್ ತೀರ್ಪಿನತ್ತ
ಮೋದಿ ಉಪನಾಮಕ್ಕೆ ಸಂಬಂಧಿಸಿದಂತೆ, ರಾಹುಲ್ ಮೇಲೆ ಮಾನನಷ್ಟ ಮೊಕದ್ದಮೆಯಡಿಯಲ್ಲಿ ಎರಡು ವರ್ಷಗಳ ಜೈಲು ಶಿಕ್ಷೆ ನೀಡಿದ ಸೂರತ್ ನ್ಯಾಯಲಯದ ಆದೇಶವನ್ನು ತಡೆಹಿಡಿಯಲು ನಿರಾಕರಿಸಿದ ಗುಜರಾತ್ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಅದರಂತೆ ಸುಪ್ರೀಂಕೋರ್ಟ್ ಜುಲೈ 21ರಂದು ವಿಚಾರಣೆ ನಡೆಸಲಾಗುವುದು ಎಂದು ನಿಗದಿ ಪಡಿಸಿತ್ತು.. ಇಂದು ರಾಹುಲ್ ಗಾಂಧಿ ಅರ್ಜಿ ವಿಚಾರಣೆ ನಡೆಯಲಿದ್ದು, ತೀರ್ಪು ಕುರಿತು ಎಲ್ಲರಲ್ಲಿ ಕುತೂಹಲ ಮೂಡಿಸಿದೆ.
ಮೋದಿ ಹೆಸರು ಇಟ್ಟುಕೊಂಡವರು ಕಳ್ಳರು ಎಂದು ಹೇಳಿದ್ದಕ್ಕೆ ರಾಹುಲ್ ಗಾಂಧಿ ಅವರಿಗೆ ಸೂರತ್ ಕೋರ್ಟ್ 2 ವರ್ಷ ಜೈಲುಶಿಕ್ಷೆ ವಿಧಿಸಿತ್ತು. ಇದನ್ನು ಪ್ರಶ್ನಿಸಿ ರಾಹುಲ್ ಗಾಂಧಿ ಗುಜರಾತ್ ಹೈಕೋರ್ಟ್ ಮೆಟ್ಟಿಲೇರಿದ್ದು. ಆದ್ರೆ, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಹುಲ್ ಗಾಂಧಿಗೆ 2 ವರ್ಷಗಳ ಜೈಲು ಶಿಕ್ಷೆಯನ್ನು ತಡೆಹಿಡಿಯಲು ಸಾಧ್ಯವಿಲ್ಲ ಎಂದು ಜುಲೈ 7 ರಂದು ಗುಜರಾತ್ ಹೈಕೋರ್ಟ್ ತೀರ್ಪು ನೀಡಿತ್ತು. ಈ ಹಿನ್ನಲೆಯಲ್ಲಿ ರಾಹುಲ್ ಗಾಂಧಿ ಗುಜರಾತ್ ಹೈಕೋರ್ಟ್ ಆದೇಶ ಪ್ರಶ್ನಿಸಿ ಜು.15ರಂದು ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಿ ಶೀಘ್ರ ವಿಚಾರಣೆಯನ್ನು ನಡೆಸುವಂತೆ ಮನವಿ ಮಾಡಲಾಗಿತ್ತು. ಈ ಹಿನ್ನಲ್ಲೆ ಇಂದು ಸುಪ್ರಿಂ ನಲ್ಲಿ ವಿವಾರಣೆ ನಡೆಯಲಿದೆ.