ಬೆಂಗಳೂರು, ಜು 26 (DaijiworldNews/HR): ಗೃಹ ಸಚಿವರಿಗೆ ಬರೆದಿರುವ ಪತ್ರದಲ್ಲಿ ನಾನು ಯಾವುದೇ ಒಂದು ಕೋಮಿನ ವಿಚಾರದಲ್ಲಿ ಪತ್ರ ಬರೆದಿಲ್ಲ. ಅಮಾಯಕರನ್ನು ದಸ್ತಗಿರಿ ಮಾಡಿ ಶಿಕ್ಷೆ ನೀಡಿರುವ ವಿಚಾರವಾಗಿ ಪ್ರಸ್ತಾಪ ಮಾಡಿದ್ದೇನೆ ಎಂದು ಶಾಸಕ ತನ್ವೀರ್ ಶೇಠ್ ಹೇಳಿದ್ದಾರೆ.
ಡಿಜೆ ಹಳ್ಳಿ, ಕೆಜಿ ಹಳ್ಳಿ ಪ್ರಕರಣದ ವಿಚರವಾಗಿ ಗೃಹ ಸಚಿವ ಪರಮೇಶ್ವರ್ ಅವರಿಗೆ ಪತ್ರ ಬರೆದಿರುವ ಕುರಿತಾಗಿ ಪ್ರತಿಕ್ರಿಯಿಸಿದ ಶಾಸಕ ತನ್ವೀರ್ ಶೇಠ್, ನಾನು ಯಾವುದೇ ಒಂದು ಕೋಮಿನ ವಿಚಾರದಲ್ಲಿ ಪತ್ರ ಬರೆದು ಪ್ರಸ್ತಾಪ ಮಾಡಿಲ್ಲ. ಅಮಾಯಕರನ್ನು ದಸ್ತಗಿರಿ ಮಾಡಿ ಶಿಕ್ಷೆ ನೀಡಿರುವ ವಿಚಾರವಾಗಿ ಪ್ರಸ್ತಾಪ ಮಾಡಿದ್ದೇನೆ ಎಂದರು.
ಇನ್ನು ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ಕೂಡ ನಾನು ಮನವಿ ಮಾಡಿಕೊಂಡಿದ್ದೆ. ಆದರೆ ಆಗ ಅದು ಹೊರಗೆ ಬಂದಿರಲಿಲ್ಲ. ಯಾವುದೇ ಒಳ್ಳೆ ಕೆಲಸ ಮಾಡಬೇಕಾದರೂ ಟೀಕೆಗಳು ಬೇಕು ಎಂದಿದ್ದಾರೆ.
ಡಿಜೆ ಹಳ್ಳಿ, ಕೆಜಿ ಹಳ್ಳಿ ಪ್ರಕರಣದಲ್ಲಿ ಅಮಾಯಕರಿದ್ದರೆ ಬಿಡುಗಡೆ ಮಾಡಿ ಎಂದು ಪತ್ರ ಬರೆದಿದ್ದೇನೆ. ಪತ್ರ ಬರೆದಿದ್ದು ನಿಜ. ಆದರೆ ಒಂದು ಕೋಮಿನ ಬಗ್ಗೆ ಉಲ್ಲೇಖಿಸಿ ಪತ್ರ ಬರೆದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.