ಚಿಕ್ಕಮಗಳೂರು, ಜು 26 (DaijiworldNews/HR): ದೇಶದ ಸಮಗ್ರತೆಗೆ ಧಕ್ಕೆಯಾಗುವಂತಹ ಕಾಂಗ್ರೆಸ್ ಮಾನಸಿಕತೆಯನ್ನು ಖಂಡಿಸುತ್ತೇನೆ. ಕಾನೂನು ಹೋರಾಟವನ್ನು ನಾವು ಮುಂದುವರೆಸುತ್ತೇವೆ. ಉಗ್ರ ಚಟುವಟಿಕೆ ಯಲ್ಲಿ ತೊಡಗಿರುವ ಆರೋಪಿಗಳನ್ನು ರಕ್ಷಣೆ ಮಾಡುವುದು ಸರಿಯಲ್ಲ ಎಂದು ಬಿಜೆಪಿ ನಾಯಕ ಸಿ.ಟಿ.ರವಿ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಈ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಜೆ ಹಳ್ಳಿ, ಕೆಜೆ ಹಳ್ಳಿ ಪ್ರಕರಣದ ಆರೋಪಿಗಳನ್ನು ಅಮಾಯಕರು ಅನ್ನುವ ಸ್ಥಿತಿಗೆ ಬಂದಿರುವುದು ನಿಜಕ್ಕೂ ಅಪಾಯಕಾರಿ. ದೇಶದ ಸಮಗ್ರತೆಗೆ ಧಕ್ಕೆಯಾಗುವಂತಹ ಕಾಂಗ್ರೆಸ್ ಮಾನಸಿಕತೆಯನ್ನು ಖಂಡಿಸುತ್ತೇನೆ. ಕಾನೂನು ಹೋರಾಟವನ್ನು ನಾವು ಮುಂದುವರೆಸುತ್ತೇವೆ. ಉಗ್ರ ಚಟುವಟಿಕೆಯಲ್ಲಿ ತೊಡಗಿರುವ ಆರೋಪಿಗಳನ್ನು ರಕ್ಷಣೆ ಮಾಡುವುದು ಸರಿಯಲ್ಲ ಎಂದರು.
ಇನ್ನು ಉಡುಪಿ ಕಾಲೇಜ್ ನಲ್ಲಿ ವಿಡಿಯೋ ಪ್ರಕರಣದಲ್ಲಿ ಪೊಲೀಸರು ತಡವಾಗಿ ಎಫ್ ಐ ಆರ್ ದಾಖಲಿಸಿದ್ದಾರೆ. ದೂರು ನೀಡಿದ ತಕ್ಷಣವೇ ಎಫ್ ಐ ಆರ್ ದಾಖಲಿಸಬೇಕಾಗಿತ್ತು. ವಿಳಂಬ ನೀತಿ ಸರಿಯಲ್ಲ. ಈ ಬಗ್ಗೆ ಸಮಗ್ರ ತನಿಖೆ ನಡೆದಾಗ ಮಾತ್ರ ಸತ್ಯಾಂಶ ಹೊರಬರಲಿದೆ ಎಂದು ಹೇಳಿದ್ದಾರೆ.