ಬೆಂಗಳೂರು, ಜು 27 (DaijiworldNews/MS): ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನದಿಂದ ಆರ್ಥಿಕ ಅಡಚಣೆ ಉಂಟಾಗಿದ್ದು ಹೀಗಾಗಿ ಸರ್ಕಾರವು ಈ ವರ್ಷ ಕ್ಷೇತ್ರಾಭಿವೃದ್ಧಿಯನ್ನು ಒದಗಿಸಲು ಸಾಧ್ಯವಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಕ್ಷೇತ್ರಾಭಿವೃದ್ಧಿಗೆ ಆರ್ಥಿಕ ನೆರವು ದೊರಕುತ್ತಿಲ್ಲ ಎಂದು ಕೆಲವು ಕಾಂಗ್ರೆಸ್ ಶಾಸಕರು ಅಸಮಾಧಾನಗೊಂಡಿದ್ದು ಈ ಹಿನ್ನಲೆಯಲ್ಲಿ ಡಿಕೆಶಿ ಮನವಿ ಮಾಡಿದ್ದಾರೆ.
ಭಾರೀ ನಿರೀಕ್ಷೆಗಳನ್ನು ಹೊಂದಿರುವ ಕಾಂಗ್ರೆಸ್ ಪಕ್ಷದ ಶಾಸಕರು ಪರಿಸ್ಥಿತಿಯನ್ನು ಅರ್ಥಮಾಡಿಕೊಂಡು ತಾಳ್ಮೆಯಿಂದ ಇರಲು ಪ್ರಯತ್ನಿಸಬೇಕು. ಕೆಲವು ವಿಷಯಗಳನ್ನು ಚರ್ಚಿಸಲು ಶಾಸಕರು ಶಾಸಕಾಂಗ ಪಕ್ಷದ ಸಭೆ ನಡೆಸುವಂತೆ ಕೇಳಿದ್ದಾರೆ. ನಾವು ಹಣಕಾಸಿನ ವಿಷಯಗಳ ಬಗ್ಗೆ ಅವರೊಂದಿಗೆ ಚರ್ಚಿಸಲು ಬಯಸುತ್ತೇವೆ. ಯಾಕೆಂದರೆ 40,000 ಕೋಟಿ ರೂ.ಗಳನ್ನು ಐದು ಗ್ಯಾರಂಟಿ ಯೋಜನೆ ಜಾರಿಗೊಳಿಸಲು ಮೀಸಲಿಡಬೇಕಾಗುತ್ತದೆ ಎಂದು ಶಿವಕುಮಾರ್ ಹೇಳಿದ್ದಾರೆ.