ಬೆಂಗಳೂರು, ಜು 27(DaijiworldNews/SM): ಕರ್ನಾಟಕ ಹಾಲು ಉತ್ಪಾದಕರ ಮಹಾಮಂಡಳ(ಕೆಎಂಎಫ್) ನಂದಿನಿ ಹಾಲಿನ ದರವನ್ನು ಪ್ರತಿ ಲೀಟರ್ ಗೆ 3 ರೂಪಾಯಿ ಹೆಚ್ಚಳ ಮಾಡುವುದಕ್ಕೆ ರಾಜ್ಯ ಸಚಿವ ಸಂಪುಟ ಸಭೆ ಗುರುವಾರ ಅನುಮೋದನೆ ನೀಡಿದೆ.
ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಎಚ್ ಕೆ.ಪಾಟೀಲ್ ಅವರು, ನಂದಿನಿ ಹಾಲಿನ ದರ ಹೆಚ್ಚಳಕ್ಕೆ ಒಪ್ಪಿಗೆ ಸೇರಿದಂತೆ ಸಭೆಯಲ್ಲಿ 15 ವಿಷಯಗಳ ಬಗ್ಗೆ ಚರ್ಚೆ ಮಾಡಲಾಗಿದೆ ಎಂದರು.
ಸಹಕಾರ ಇಲಾಖೆ ಅಡಿಯಲ್ಲಿ ಎಪಿಎಮ್ಸಿಗಳಿಗೆ ರಸ್ತೆ ನಿರ್ಮಾಣ ಮಾಡಲು, ಮೂಲಭೂತ ಸೌಲಭ್ಯ ಒದಗಿಸಲು 130.40 ಕೋಟಿ ಮಂಜೂರು ಮಾಡಲಾಗಿದೆ. ಮೊಟ್ಟೆ ನೀಡುವ ವಿಚಾರದಲ್ಲಿ ವಿಭಾಗವಾರು ಮೊಟ್ಟೆ ಖರೀದಿಸಿ ವಿತರಿಸುವ ನಿರ್ಣಯ ತೆಗೆದುಕೊಳ್ಳಲಾಗಿದೆ ಎಂದು ಸಚಿವರು ತಿಳಿಸಿದರು.